ವಿಡಿಯೋ ರಿಪೋರ್ಟ್: ಶಿವಮೊಗ್ಗದಲ್ಲಿ ತಲೆ ಎತ್ತಲಿದೆ ಯೋಗಭವನ, ಶಿವಮೊಗ್ಗಕ್ಕೆ ಬರಲಿದ್ದಾರೆ ನಗರಾಭಿವೃದ್ಧಿ ಸಚಿವ ಭೈರತಿ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿಗಳ ಚಾಲನೆ, ಶಂಕುಸ್ಥಾಪನೆಗೆ ಶಿವಮೊಗ್ಗಕ್ಕೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಡಿಸೆಂಬರ್ 28ರಂದು ಶಿವಮೊಗ್ಗ ನಗರಕ್ಕೆ ಬರಲಿದಾರೆ.

ವಿಡಿಯೋ ರಿಪೋರ್ಟ್

3.92 ಕೋಟಿ ರೂ. ವೆಚ್ಚದಲ್ಲಿ ಯೋಗ ಭವನಕ್ಕೆ ಶಂಕುಸ್ಥಾಪನೆ ನೆರವೇರಿಲಿದ್ದಾರೆ. ಜತೆಗೆ, 12.61 ಕೋಟಿ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ 19.48 ಕೋಟಿ ರೂ. ವೆಚ್ಚದ ಕಾಮಗಾರಿಗಳ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಸ್ಮಾರ್ಟ್ ಸಿಟಿ ಎಂಡಿ ಚಿದಾನಂದ್ ವಟಾರೆ, ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ಎಸ್.ಎನ್. ಚನ್ನಬಸಪ್ಪ ಮತ್ತಿತರರು ಉಪಸ್ಥಿತರಿದ್ದರು.

error: Content is protected !!