Shivamogga airport | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ‌ ಉದ್ಯೋಗ ಅವಕಾಶಗಳ ಬಗ್ಗೆ ಸಂಸದ ರಾಘವೇಂದ್ರ ಹೇಳಿದ್ದೇನು?

BYR Airport

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣ (shimoga airport)ದ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದೇ ದೊಡ್ಡ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದೆ. ಅದರ ಬಗ್ಗೆ ಎಚ್ಚರ ವಹಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ (BY Raghavendra) ಸಲಹೆ ನೀಡಿದರು.
ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು, ‘ವಿಮಾನ ನಿಲ್ದಾಣದಲ್ಲಿ ಉದ್ಯೋಗ(Job)ವೆಂದು ಜಾಲತಾಣಗಳಲ್ಲಿ ನಕಲಿ ಜಾಹೀರಾತು ನೀಡಿರುವುದು ಗಮನಕ್ಕೆ ಬಂದಿದೆ. ಇದನ್ನು ನಂಬಿ ಯುವ ಸಮೂಹ ಮೋಸ ಹೋಗಬಾರದು. ನಕಲಿ ಜಾಹೀರಾತು ನೀಡಿದವರ ಮೇಲೆ ಕ್ರಮ ಜರುಗಿಸಲಾಗುತ್ತದೆ ಎಂದರು.

ಈಗಲು ವಿಮಾನ ನಿಲ್ದಾಣದ ಕೆಲಸಗಳು ನಡೆಯುತ್ತಿವೆ. ಶಿವಮೊಗ್ಗಕ್ಕೆ ವಿಮಾನ ಹಾರಾಟ ಸಂಬಂಧ ಫೆ.3ರಂದು ಇಂಡಿಗೋ ಮತ್ತು ಸ್ಟಾರ್ ಏರ್ ಲೈನ್ಸ್ ಜೊತೆಗೆ ಮಾತುಕತೆ ನಡೆಯುತ್ತಿದೆ. ವಿಮಾನ ನಿಲ್ದಾಣಕ್ಕೆ ಜಾಗ ನೀಡಿದವರಿಗೆ ನಿವೇಶನವನ್ನು ವಿಮಾನ ನಿಲ್ದಾಣದ ಉದ್ಘಾಟನೆಗೆ ಮುನ್ನ ನೀಡಲಾಗುವುದು.
ಬಿ.ವೈ.ರಾಘವೇಂದ್ರ, ಸಂಸದ

ನೇಮಕಾತಿಯೇ ಆರಂಭವಾಗಿಲ್ಲ
ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಸಿಬ್ಬಂದಿಯ ನೇಮಕಾತಿಯೇ ಆರಂಭವಾಗಿಲ್ಲ. ಹೀಗಾಗಿ, ಯಾರೂ ಸಹ ಗಾಳಿ ಸುದ್ದಿಗಳನ್ನು ನಂಬಬಾರದು ಎಂದು ಹೇಳಿದರು.

READ | ಶಿಮುಲ್‌ ನಲ್ಲಿ ಭರ್ಜರಿ ಉದ್ಯೋಗ ಅವಕಾಶ, ಖಾಲಿ‌ ಹುದ್ದೆಗಳ ಭರ್ತಿಗೆ ಅಧಿಸೂಚನೆ

ವಿಐಎಸ್‌ಎಲ್ ಪುನಶ್ಚೇತನಕ್ಕಾಗಿ ನಿಯೋಗ
ವಿಐಎಸ್‌ಎಲ್ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಳಿ ನಿಯೋಗ ಕೊಂಡೊಯ್ಯಲು ಚಿಂತಿಸಲಾಗುತ್ತಿದೆ. ಸದ್ಯ ಮುಖ್ಯಮಂತ್ರಿ ಅವರು ಬಜೆಟ್ ಸಿದ್ಧತೆಯಲ್ಲಿದ್ದಾರೆ. ಬೆಜೆಟ್ ಬಳಿಕ ನಿಯೋಗ ಕೊಂಡೊಯ್ದು ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ವಿಮಾನ ನಿಲ್ದಾಣದಲ್ಲಿ ಉದ್ಯೋಗ ಲಭ್ಯವಿರುವ ಬಗ್ಗೆ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ‌ ಹರಿಬಿಡಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಸಂದೇಶ ಎಲ್ಲಿಂದ ಆರಂಭಗೊಂಡಿದೆ ಎಂಬುವುದರ ಬಗ್ಗೆ ತನಿಖೆ ನಡೆಯುತ್ತಿದೆ‌.
ಜಿ.ಕೆ.ಮಿಥುನ್ ಕುಮಾರ್, ಎಸ್.ಪಿ

Airport hiring fake
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ‌ ಉದ್ಯೋಗಾವಕಾಶ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ‌ ಹರಿದಾಡುತ್ತಿರುವ ಪೋಸ್ಟ್.

ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಶಾಸಕ ಕೆ.ಬಿ.ಅಶೋಕ್‌ ನಾಯ್ಕ, ಸೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಶಿವರಾಜ್, ಅಣ್ಣಪ್ಪ, ಬಿ.ಕೆ. ಶ್ರೀನಾಥ್, ಹರಿಕೃಷ್ಣ, ಚಂದ್ರಶೇಖರ್ ಮತ್ತಿತರರು ಇದ್ದರು.

https://suddikanaja.com/2023/02/03/science-museum-at-sahyadri-college-shivamogga/

error: Content is protected !!