ಜನವರಿ 17ರಂದು ಪಲ್ಸ್ ಪೊಲಿಯೊ, ಜಿಲ್ಲೆಯ 867 ಕೇಂದ್ರಗಳಲ್ಲಿ ಲಸಿಕೆ ಲಭ್ಯ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ರಾಷ್ಟ್ರೀಯ ಪಲ್ಸ್ ಪೊಲಿಯೊ ಕಾರ್ಯಕ್ರಮದ ಅಂಗವಾಗಿ ಜನವರಿ 17ರಂದು 867 ಕೇಂದ್ರಗಳಲ್ಲಿ 1,33,491 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಕರೆಯಲಾಗಿದ್ದ ವೈದ್ಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

14 smg 2ಕಾರ್ಯಕ್ರಮದ ಅನುಷ್ಠಾನದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರವು ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಲಸಿಕೆ ಕೇಂದ್ರಕ್ಕೆ ಮಕ್ಕಳನ್ನು ಕರೆ ತರುವ ಪೋಷಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮುಖಕ್ಕೆ ಮಾಸ್ಕ್ ಧರಿಸಬೇಕು. ಸ್ಯಾನಿಟೈಜರ್ ಬಳಸಬೇಕು. ಕೇಂದ್ರಕ್ಕೆ ಮಕ್ಕಳನ್ನು ಕರೆತರುವ ಆಶಾ ಕಾರ್ಯಕರ್ತರು ಹಂತ ಹಂತವಾಗಿ ಕರೆತರಬೇಕು.
– ಕೆ.ಬಿ.ಶಿವಕುಮಾರ್, ಶಿವಮೊಗ್ಗ ಜಿಲ್ಲಾಧಿಕಾರಿ

ಈ ಆಂದೋಲನದಲ್ಲಿ 1734 ತಂಡಗಳಲ್ಲಿ ಲಸಿಕೆ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಅಲ್ಲದೆ 19 ಸಂಚಾರಿ ಬೂತ್ ಹಾಗೂ 30 ಟ್ರಾನ್ಸಿಸ್ಟ್ ಬೂತ್ ವ್ಯವಸ್ಥೆ ಕಲ್ಪಿಸಲಾಗಿದೆ. 210 ಮೇಲ್ವಿಚಾರಕರು ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಜಿಲ್ಲೆಯಾದ್ಯಂತ ಸಂಚರಿಸಿ ಕಾರ್ಯಕ್ರಮದ ಮೇಲುಸ್ತುವಾರಿ ನಡೆಸಲಿದ್ದಾರೆ. ಗುರಿಗೆ ಅನುಸಾರವಾಗಿ ಸಾಕಷ್ಟು ಪ್ರಮಾಣದ ಲಸಿಕೆ ಲಭ್ಯವಾಗಲಿದ್ದು, ಲಸಿಕೆಯ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ಹಾಗೂ ಶೀತಲೀಕರಣ ವ್ಯವಸ್ಥೆ ಮತ್ತು ಸರಬರಾಜಿನ ಬಗ್ಗೆ ನಿಗಾ ವಹಿಸಲಿದ್ದಾರೆ ಎಂದರು.
ಎಸ್‍ಪಿ ಕೆ.ಎಂ.ಶಾಂತರಾಜು, ಡಿಎಚ್‍ಒ ಡಾ.ರಾಜೇಶ್ ಸುರಗೀಹಳ್ಳಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.

error: Content is protected !!