Jobs in shivamogga | ಆರೋಗ್ಯ ಇಲಾಖೆಯಲ್ಲಿ 14 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ, ನಾಲ್ಕು ದಿನ ಬಾಕಿ

IMG 20220517 232257 102

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ತಜ್ಞ ವೈದ್ಯರ ನೇಮಕಕ್ಕೆ‌ ಅರ್ಜಿ ಆಹ್ವಾನಿಸಲಾಗಿದೆ.

READ | ಶಿಮುಲ್‌’ನಲ್ಲಿ‌ ಭರ್ಜರಿ‌ ಉದ್ಯೋಗ ಅವಕಾಶ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಯಾವ್ಯಾವ ಹುದ್ದೆಗಳು ಖಾಲಿ?
2 ಸ್ತ್ರೀರೋಗ ತಜ್ಞರು, 2 ಮಕ್ಕಳ ತಜ್ಞರು ಹಾಗೂ 3 ಅರಿವಳಿಕೆ ತಜ್ಞರ ಒಟ್ಟು 7 ತಜ್ಞ ವೈದ್ಯರ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲು ಅರ್ಹ ತಜ್ಞ ವೈದ್ಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಫೆ.10 ಕೊನೆಯ ದಿನ
ಆಸಕ್ತ ಅಭ್ಯರ್ಥಿಗಳು ಫೆ.10 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಎಚ್.ರಸ್ತೆ ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆಯ/ ತರಬೇತಿಯ ಎಲ್ಲ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-222382 ಅನ್ನು ಸಂಪರ್ಕಿಸಲು ಕೋರಲಾಗಿದೆ.

error: Content is protected !!