Shivamogga airport | ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರು ಘೋಷಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಯಾರ ಹೆಸರು ಪ್ರಕಟ?

Shivamogga airport

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರು ವಿಮಾನ ನಿಲ್ದಾಣ(shimoga airport)ದ ಹೆಸರನ್ನು ಘೋಷಿಸಿದರು.
ಭಾನುವಾರ ತಮ್ಮ ನಿವಾಸದಲ್ಲಿ ಕರೆದಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು (Kuvempu) ಅವರ ಹೆಸರು ಇಡಬೇಕು ಎಂಬ ವಿಚಾರವನ್ನು ಸಂಪುಟದಲ್ಲಿ ನಿರ್ಧರಿಸಲಾಗಿದೆ. ಅದನ್ನು ವಿಮಾನ ನಿಲ್ದಾಣ ಲೋಕಾರ್ಪಣೆಯ ದಿನದಂದು ಘೋಷಿಸಲಾಗುವುದು ಎಂದು ತಿಳಿಸಿದರು.

VIDEO REPORT

ಆರಂಭದಿಂದಲೂ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡಬಾರದು ಎಂದು ಹೇಳಿಕೊಂಡುಬಂದಿದ್ದೇನೆ. ವಿಶ್ವಮಾನವ ಸಂದೇಶ ಸಾರಿದ ಕುವೆಂಪು ಅವರ ಹೆಸರು ಇಡುವಂತೆ ಸದನದಲ್ಲಿ ಪ್ರಸ್ತಾಪಿಸಲಾಗಿದೆ. ಇದನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ.
ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ತಿ

ಫೆ.27ರಂದು ಶಿವಮೊಗ್ಗಕ್ಕೆ ಮೋದಿ ಆಗಮನ
ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆ ಕಾರ್ಯಕ್ರಮವು ಫೆ.27ರಂದು ನಡೆಯಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುವುದು ಖಚಿತವಾಗಿದೆ ಎಂದರು.

READ | ಫೆ.27ರಂದು ಶಿವಮೊಗ್ಗಕ್ಕೆ ಮೋದಿ ಭೇಟಿ ಹಿನ್ನೆಲೆ ನಡೀತು ಪ್ರಮುಖ ಸಭೆ, ಅಧಿಕಾರಿಗಳಿಗೆ ನೀಡಿದ ಸೂಚನೆಗಳೇನು?

140 ಸೀಟುಗಳನ್ನು ಗೆಲ್ಲುವ ಗುರಿ
ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ 140 ಸೀಟುಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ. ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಕ್ರಿಯವಾಗಿ ಪಕ್ಷದಲ್ಲಿ ಕಾರ್ಯನಿರ್ವಹಿಸುವೆ ಎಂದು ಹೇಳಿದರು. ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.

error: Content is protected !!