ಸುದ್ದಿ ಕಣಜ.ಕಾಂ ಬೆಂಗಳೂರು: ಗುರುವಾರ ರಾತ್ರಿಯಿಂದ ಜಾರಿಯಾಗಬೇಕಿದ್ದ ರಾತ್ರಿ ಕಫ್ರ್ಯೂ ಅನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕ ಅಭಿಪ್ರಾಯ ಹಿನ್ನೆಲೆ ಕಫ್ರ್ಯೂ ಹಿಂಪಡೆದಿರುವುದಾಗಿ ತಿಳಿಸಿದ್ದಾರೆ.
ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರದ ಕೊರೊನಾ ವೈರಸ್ ಹರಡುವಿಕೆ ತಡೆಗೆ ತಜ್ಞರ ಸಲಹೆಯಂತೆ ನೈಟ್ ಕಫ್ರ್ಯೂ ಜಾರಿಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ರಾತ್ರಿ ಕಫ್ರ್ಯೂ ಅಗತ್ಯ ಇಲ್ಲವೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ, ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಮತ್ತು ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮನಗಂಡು ಕಫ್ರ್ಯೂ ಕೈಬಿಡಲಾಗಿದೆ.
ಸ್ವಯಂ ನಿರ್ಬಂಧಕ್ಕೆ ಮನವಿ: ಕೊರೊನಾ ವಿರುದ್ಧ ಜಯಿಸಲು ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ಸುದ್ದಿ ಕಣಜ.ಕಾಂ | DISTRICT | EDUCATION CORNER ಶಿವಮೊಗ್ಗ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾರ್ಚ್ 28 ರಿಂದ ಏಪ್ರಿಲ್ 14ರ ವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಕುರಿತು ಮಾರ್ಗದರ್ಶನ ನೀಡಲು ಮಾ.15 ರಿಂದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ (SHIMOGA AIRPORT) SHIVAMOGGA: ಜನವರಿಯಿಂದ ಸ್ಥಗಿತಗೊಂಡ ರಾತ್ರಿ ಲ್ಯಾಂಡಿಂಗ್ (night landing) ಕೆಲಸದ ಪುನರಾರಂಭವನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಅನುಮೋದಿಸಿದೆ. ವಿಮಾನ ನಿಲ್ದಾಣದ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ […]