Shivamogga Airport | ಶಿವಮೊಗ್ಗ ವಿಮಾನ ನಿಲ್ದಾಣ ಹೆಸರು ಘೋಷಣೆ ಬೆನ್ನಲ್ಲೇ ಟ್ವಿಟರ್’ನಲ್ಲಿ ಬಿಸಿಬಿಸಿ ಚರ್ಚೆ ಶುರು, ಏನದು?

Shivamoggga airport tweets

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B.S.Yediyurappa) ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರನ್ನು ಘೋಷಣೆ ಮಾಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣವಾದ ಟ್ವಿಟರ್(Twitter)ನಲ್ಲಿ ಬಿಸಿಬಿಸಿ ಚರ್ಚೆ ಆರಂಭವಾಗಿದೆ.
ಯಡಿಯೂರಪ್ಪ ಅವರು ಶಿವಮೊಗ್ಗದ ತಮ್ಮ ನಿವಾಸದಲ್ಲಿ ವಿಮಾನ ನಿಲ್ದಾಣಕ್ಕೆ ‘ಕುವೆಂಪು'(Kuvempu) ಅವರ ಹೆಸರನ್ನು ಸೂಚಿಸಲಾಗಿದೆ. ಸದನದಲ್ಲಿ ತೀರ್ಮಾನಿಸಿ ಕೇಂದ್ರಕ್ಕೆ ಈ ಹೆಸರನ್ನು ಶಿಫಾರಸು ಮಾಡಲಾಗಿದೆ. ಫೆ.27ರಂದು ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಹೆಸರನ್ನು ಘೋಷಿಸಲಿದ್ದಾರೆ ಎಂದು ತಿಳಿಸಿದ್ದರು. ಈ ವಿಚಾರ ಶರವೇಗದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

VIDEO REPORT

READ | ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರು ಘೋಷಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಯಾರ ಹೆಸರು ಪ್ರಕಟ?

ಏನೇನು ಚರ್ಚೆ, ಯಡಿಯೂರಪ್ಪಗೆ ಭೇಷ್?

  • ಮಲೆನಾಡು ಮಾತ್ರವಲ್ಲದೇ ಕರ್ನಾಟಕದ ವಿವಿಧೆಡೆಯಿಂದ ಟ್ವೀಟ್ ಮಾಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಯಡಿಯೂರಪ್ಪ ಅವರು ತೆಗೆದುಕೊಂಡ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
  • ರಾಜ್ಯ ಸರ್ಕಾರವೇ ಯಡಿಯೂರಪ್ಪ ಅವರ ಹೆಸರನ್ನು ಶಿಫಾರಸು ಮಾಡಲು ಮುಂದಾದರೂ ಬಿ.ಎಸ್.ವೈ. ಅವರು ಪ್ರಬುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ವ್ಯಕ್ತಿಯೊಬ್ಬರು ಅಭಿಪ್ರಾಯ ಹಂಚಿಕೊಂಡಿದ್ದಾರೆ.
  • ಕುವೆಂಪು ಅವರ ಬದಲು ಬಂಗಾರಪ್ಪ ಹೆಸರಿಡಿ, ಆಗ ಈಡಿಗರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನಿಮ್ಮನ್ನು ಬೆಂಬಲಿಸುತ್ತಾರೆ. ಈಗಾಗಲೇ ವಿವಿಗೆ ಕುವೆಂಪು ಅವರ ನಾಮಕರಣ ಮಾಡಲಾಗಿದೆಯಲ್ಲ? ಎಂದು ಹೇಳಿಕೊಂಡಿದ್ದಾರೆ.
  • ಯಡಿಯೂರಪ್ಪ ಅವರು ಶಿವಮೊಗ್ಗ ವಿಮಾನ ನಿಲ್ದಾಣ ಮಾತ್ರವಲ್ಲದೇ ಜಿಲ್ಲೆಯ ಪ್ರಗತಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಹೀಗಾಗಿ, ಯಡಿಯೂರಪ್ಪ ಹೆಸರು ಇಡುವುದರಲ್ಲಿ ತಪ್ಪೇನಿದೆ? ಎನ್ನಲಾಗಿದೆ.
  • ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲು ತೀರ್ಮಾನಿಸಿದ್ದಕ್ಕೆ ಸಾಕಷ್ಟು ಜನ ಯಡಿಯೂರಪ್ಪ ಅವರನ್ನು ಅಭಿನಂದಿಸಿದ್ದಾರೆ. ಹೀಗೆ ಸೋಶಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Bike Rally | ಬೈಕ್‍ನಲ್ಲೇ ದೇಶ ಪರ್ಯಟನೆಗೆ ಹೊರಟ ಮಲೆನಾಡು ಹುಡುಗ, ಬೈಕಿನ ವಿಶೇಷಗಳೇನು?

error: Content is protected !!