Job in shivamogga | ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂದರ್ಶನ

IMG 20220517 232257 102

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿ ಸಂಬಂಧ ಮಾರ್ಚ್ 1 ರಂದು ಸಂದರ್ಶನ ನಡೆಯಲಿದೆ.

READ | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಡಿಜಿಸಿಎದಿಂದ ಲೈಸೆನ್ಸ್, ಫೆ.27ರಂದು ಎಷ್ಟು ಗಂಟೆಗೆ ಬರಲಿದ್ದಾರೆ ಮೋದಿ, ಸಮಯ ಮೀರಿದರೆ ಜನರಿಗೆ ನೋ ಎಂಟ್ರಿ

ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ ಪಶುವೈದ್ಯಕೀಯ ರೋಗಶಾಸ್ತ್ರ, ಹಾಗೂ ಪಶುವೈದ್ಯಕೀಯ  ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುವುದು.
ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ₹56,700 ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ₹50,000 ವೇತನವಾಗಿ ಪಾವತಿಸಲಾಗುವುದು.
ಸಂದರ್ಶನವನ್ನು ಮಾರ್ಚ್ 1 ರ ಬೆಳಗ್ಗೆ 11 ಗಂಟೆಯಿಂದ ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ ಶಿವಮೊಗ್ಗ ಇಲ್ಲಿ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ 08182-200872 ಹಾಗೂ ವಿಶ್ವವಿದ್ಯಾಲಯದ ಜಾಲತಾಣ www.kvafsu.edu.in  ನ್ನು ಸಂಪರ್ಕಿಸಬಹುದೆಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ತಿಳಿಸಿದ್ದಾರೆ.

error: Content is protected !!