ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೇಂದ್ರ ಸರ್ಕಾರದ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಶಿವಮೊಗ್ಗದ ನೆಹರೂ ಯುದ ಕೇಂದ್ರ ವತಿಯಿಂದ 2022-23 ನೇ ಸಾಲಿನ ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಜಿಲ್ಲೆಯ 7 ತಾಲ್ಲೂಕುಗಳಲ್ಲಿ ತಾಲ್ಲೂಕಿಗೆ ಇಬ್ಬರಂತೆ ಕೆಲಸ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
READ | ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಶಿವಮೊಗ್ಗದಲ್ಲಿ ನಡೆಯಲಿದೆ ಸಂದರ್ಶನ
ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತೆ
ವಿದ್ಯಾರ್ಹತೆ ಕನಿಷ್ಠ ಎಸ್ಎಸ್ಎಲ್ಸಿ ಪಾಸಾಗಿರಬೇಕು. 18 ರಿಂದ 29 ವರ್ಷದ ಒಳಗಿನವರಾಗಿರಬೇಕು. ಎನ್ಎಸ್ಎಸ್/ಎನ್ಸಿಸಿ ಯಲ್ಲಿ ಅನುಭವವುಳ್ಳ ಅಭ್ಯರ್ಥಿಗಳು ಹಾಗೂ ನೆಹರು ಯುವ ಕೇಂದ್ರದಲ್ಲಿ ನೋಂದಾಯಿತ ಯುವಕ/ಯುವತಿ ಸಂಘಗಳ ಸದಸ್ಯರುಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಓದುತ್ತಿರುವ ಕಾಲೇಜು ವಿದ್ಯಾರ್ಥಿಗಳು ಹಾಗೂ ಈಗಾಗಲೇ ಬೇರೆ ಕಡೆ ಕೆಲಸ ಮಾಡುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತಿಲ್ಲ. ಮಾಸಿಕ ₹5,000 ಗೌರವಧನ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು www.nyks.nic.in ವೆಬ್ಸೈಟ್ ನಲ್ಲಿ ಅಥವಾ ಜಿಲ್ಲಾ ಯುವ ಅಧಿಕಾರಿಗಳ ಕಚೇರಿ, ನೆಹರು ಯುವ ಕೇಂದ್ರ ಇಲ್ಲಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮಾ.9 ಕಡೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08182-220883, 7975443499, 9961332968 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ತಿಳಿಸಿರುತ್ತಾರೆ.