Power cut | ಶಿವಮೊಗ್ಗದಲ್ಲಿ‌ ಎರಡು ದಿನ ಕರೆಂಟ್ ಇರಲ್ಲ

IMG 20220521 162055 149

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಫೆ.24 ಮತ್ತು‌ 25ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ಕೋರಿದೆ.

READ | ಫೆ.27ರಂದು ವಿಮಾನ ನಿಲ್ದಾಣಕ್ಕೆ ಎಷ್ಟು ಗಂಟೆಗೆ ಬರಲಿದ್ದಾರೆ ಮೋದಿ? 

ಫೆ.24ರಂದು 11 ಕೆವಿ ಮಾರ್ಗದ ನಿರ್ವಹಣಾ ಕೆಲಸ ಇರುವುದರಿಂದ 11 ಕೆವಿ ಮಾರ್ಗ ಮುಕ್ತತೆ ನೀಡುವ ಕಾರಣ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಬೊಮ್ಮನಕಟ್ಟೆ ಎ ಬ್ಲಾಕ್, ಹಳೆ ಬೊಮ್ಮನಕಟ್ಟೆ, ದೇವಂಗಿ 2ನೇ ಹಂತ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ಮಾರ್ಗದ ನಿರ್ವಹಣೆ ಕಾರ್ಯ ಮತ್ತು ತುರ್ತು ಕಾಮಗಾರಿ ಇರುವ ಕಾರಣ 24 ರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು ಇನ್ನಿತರ ಸುತ್ತಮುತ್ತಲಿನ ಹಳ್ಳಿಗಳು ಹಾಗೂ ಹಾರನಹಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಇನ್ನಿತರ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ‌
ಫೆ.25ರಂದು ಪವರ್ ಕಟ್
ಫೆ. 25 ರಂದು 11 ಕೆವಿ ಮಾರ್ಗದ ನಿರ್ವಹಣಾ ಕೆಲಸ ಇರುವುದರಿಂದ 11ಕೆವಿ ಮಾರ್ಗ ಮುಕ್ತತೆ ನೀಡುವ ಕಾರಣ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಕುವೆಂಪು ನಗರ, ಎನ್ಸಪ್ರಾ ಸಿಟಿ, ಶಿವಕುಮಾರ ಸ್ವಾಮಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

error: Content is protected !!