Transport Problem | ಫೆ.26ರಿಂದ 2 ದಿನ KSRTC ಬಸ್ ಸಂಚಾರದಲ್ಲಿ ವ್ಯತ್ಯಯ, ಕಾರಣವೇನು?

ksrtc

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಫೆ.27ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಶಿವಮೊಗ್ಗದ ನೂತನ ವಿಮಾನ ನಿಲ್ದಾಣದ ಉದ್ಘಾಟನೆ ಮಾಡಲು ಆಗಮಿಸುತ್ತಿರುವುದರಿಂದ ಫೆ.26ರ ಮಧ್ಯಾಹ್ನದಿಂದ 27ರ ವರೆಗೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಕ.ರಾ.ರ.ಸಾ. ನಿಗಮದ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

READ | ಪ್ರಧಾನಿ ಆಗಮನ ಹಿನ್ನೆಲೆ‌ ಹಲವು ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗದ ವ್ಯವಸ್ಥೆ, ಎಲ್ಲೆಲ್ಲಿ ಪಾರ್ಕಿಂಗ್ ವ್ಯವಸ್ಥೆ?

ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ಆಗಮಿಸುವ ಸಲುವಾಗಿ ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 200 ವಾಹನಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ. ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಶಿವಮೊಗ್ಗ ವಿಭಾಗದ ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

error: Content is protected !!