DC nade halli kade | ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಡೇಟ್ ಫಿಕ್ಸ್, ಯಾವ ಗ್ರಾಮಕ್ಕೆ ಭೇಟಿ?

DC Grama Vastavya

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿಗಳು ಮಾರ್ಚ್ 18 ರಂದು ಸಾಗರ ತಾಲ್ಲೂಕಿನ ತಾಳಗುಪ್ಪ ಹೋಬಳಿಯ ಸೈದೂರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡುವರು.

READ |ಮಂಗಳೂರಿನಿಂದ ಬಸ್ಸಿನಲ್ಲಿ ಬಂತು ಪಾರ್ಸಲ್, ಪೊಲೀಸರ ದಾಳಿ‌ ಮೂವರು ಅರೆಸ್ಟ್

ಅಂದು ಬೆಳಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಮತ್ತು ಇತರೆ ಎಲ್ಲ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಗ್ರಾಮ ವಾಸ್ತವ್ಯ ಮಾಡುವರು.
ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ, ಮಾ. 18 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಎಸ್.ಎಸ್. ಬಿರಾದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!