ಮನ್ ಕೀ ಬಾತ್ ವೇಳೆ ಶಿವಮೊಗ್ಗದಲ್ಲಿ ತಟ್ಟೆ ಬಾರಿಸಿ ಪ್ರತಿಭಟನೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಶಿವಮೊಗ್ಗ ಜಿಲ್ಲಾ ಎನ್‍ಎಸ್‍ಯುಐ ಬೆಂಬಲ ವ್ಯಕ್ತಪಡಿಸಿದೆ.
ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ರೈತ ಹೋರಾಟಗಾರರು ಕರೆ ನೀಡಿದಂತೆ, ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ಭಾಷಣ ಸಂದರ್ಭದಲ್ಲಿ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಜಿಲ್ಲಾ ಎನ್‍ಎಸ್‍ಯುಐ ಕಾರ್ಯಕರ್ತರು ವೃತ್ತದಲ್ಲಿ ತಟ್ಟೆ ಬಾರಿಸುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.

error: Content is protected !!