Police raid | ಮೆಗ್ಗಾನ್ ಆಸ್ಪತ್ರೆ, ದುರ್ಗಿಗುಡಿ ಸುತ್ತಮುತ್ತ ಪೊಲೀಸರ ದಾಳಿ

police

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ದೊಡ್ಡಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಮೆಗ್ಗಾನ್‌ ಆಸ್ಪತ್ರೆಯ ಸುತ್ತ ಹಾಗೂ ದುರ್ಗಿಗುಡಿ ಭಾಗದಲ್ಲಿ ತಂಬಾಕು ನಿಯಂತ್ರಣ ಕಾನೂನುಗಳನ್ನು ಉಲ್ಲಂಘಿಸುವವರ ವಿರುದ್ಧ ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಲಾಯಿತು.

READ | ಶಿವಮೊಗ್ಗದಿಂದ ಎರಡು ರೈಲುಗಳ ಸಂಚಾರ ಪುನರಾರಂಭ, ಇಲ್ಲಿದೆ ವೇಳಾಪಟ್ಟಿ

ತಾಲೂಕು ಆರೋಗ್ಯ ಅಧಿಕಾರಿ ಡಾ.ಚಂದ್ರಶೇಖರ್‌ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ತಂಬಾಕು ನಿಯಂತ್ರಣ ಸಮಿತಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ 18 ಪ್ರಕರಣಗಳನ್ನು ದಾಖಲಿಸಿ, ₹2740 ದಂಡವನ್ನು ಸಂಗ್ರಹಿಸಲಾಯಿತು.
ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹೇಮಂತ್‌ರಾಜ್‌ ಅರಸ್‌, ಸಮಾಜ ಕಾರ್ಯಕರ್ತ ರವಿರಾಜ್‌, ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

error: Content is protected !!