Stone pelting | ಬಿ.ಎಸ್.ಯಡಿಯೂರಪ್ಪ ಮನೆಯ ಮೇಲೆ ಕಲ್ಲು ತೂರಾಟ, ಇದುವರೆಗೆ ದಾಖಲಾದ ಪ್ರಕರಣಗಳೆಷ್ಟು?

BSY

 

 

ಸುದ್ದಿ ಕಣಜ.ಕಾಂ ಶಿಕಾರಿಪುರ
SHIKARIPURA: ಪಟ್ಟಣದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಇದುವರೆಗೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಿಸಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ‌.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

READ |ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನೆಯ ಮೇಲೆ ಕಲ್ಲು ತೂರಾಟ, ಕಿಟಕಿಯ ಗಾಜು ಪೀಸ್ ಪೀಸ್

ಒಳ ಮೀಸಲಾತಿಯನ್ನು ವಿರೋಧಿಸಿ ನಡೆದ ಹೋರಾಟವು ಏಕಾಏಕಿ ಕಲ್ಲು ತೂರಾಟದ ಹಂತಕ್ಕೆ ಬೆಳೆದು ಪೊಲೀಸರ ಮೇಲೆಯೂ ದಾಳಿ ನಡೆಸಲಾಗಿದೆ. ಇದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಜತೆಗೆ, ಘಟನೆಯಲ್ಲಿ ಗಾಯಗೊಂಡ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶಿಕಾರಿಪುರಕ್ಕೆ ಭೇಟಿ ನೀಡಿರುವ ಆರಗ ಜ್ಞಾನೇಂದ್ರ ಅವರು ಪರಿಸ್ಥಿತಿಯನ್ನು ಅವಲೋಕಿಸಿ ಪೊಲೀಸರಿಂದ ಮಾಹಿತಿಯನ್ನು ಪಡೆದರು‌.

error: Content is protected !!