Job interview | ನಾಳೆ‌‌ ಪ್ರತಿಷ್ಠಿತ ಕಂಪನಿಗಳಿಂದ ನಡೆಯಲಿದೆ ಸಂದರ್ಶನ, ಯಾರೆಲ್ಲ ಭಾಗವಹಿಸಬಹುದು?

IMG 20220517 232257 102

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ (shimoga employment exchange office) ವತಿಯಿಂದ ಏ.12ರ ಬೆಳಗ್ಗೆ 10 ಗಂಟೆಗೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

READ | ಗನ್ ಹಿಂಭಾಗದಿಂದ ಹಲ್ಲೆ ಮಾಡಿದ್ದ ಅಜರ್ ಅರೆಸ್ಟ್, ವಿಚಾರಣೆ ವೇಳೆ ಸಿಕ್ಕಿದ್ದೇನು?

ಯಾರೆಲ್ಲ‌ ಪಾಲ್ಗೊಳ್ಳಲು ಅವಕಾಶ?
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-255293, 9380663606 ಮತ್ತು 9482023412, 9535312531 ಮೂಲಕ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Theft case | ಮನೆಗೆ ಕನ್ನ ಹಾಕಿದ್ದ ಮಹಿಳೆ ಅರೆಸ್ಟ್, ಅವಳ ಬಳಿ ಸಿಕ್ಕಿದ್ದೇನು?

error: Content is protected !!