KS Eshwarappa Resign | ಕೆ.ಎಸ್.ಈಶ್ವರಪ್ಪ ಚುನಾವಣಾ ರಾಜಕಾರಣಕ್ಕೆ ರಾಜೀನಾಮೆ ಘೋಷಣೆ, ಇಂಥದ್ದೊಂದು ಪತ್ರ ವೈರಲ್

KS Eshwarappa

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ (KS Eshwarappa) ಅವರು ಚುನಾವಣಾ ರಾಜಕಾರಣಕ್ಕೆ ರಾಜೀನಾಮೆ ನೀಡಿದ್ದು, ಇಂಥದ್ದೊಂದು ಪತ್ರ ಸದ್ಯ ವೈರಲ್ ಆಗಿದೆ.

IMG 20230411 WA0007
ಪತ್ರದಲ್ಲಿ ಏನಿದೆ?
ಕೆ.ಎಸ್.ಈಶ್ವರಪ್ಪ ಅವರ ಲೆಟರ್ ಹೆಡ್ ಇರುವ ಪತ್ರವೊಂದನ್ನು ಬಿಜೆಪಿ ರಾಷ್ಟಯ ಅಧ್ಯಕ್ಷ ಜಗತ್‌ಪ್ರಕಾಶ್‌ ನಡ್ಡಾ ಅವರಿಗೆ ಪತ್ರ ಬರೆದಿದ್ದು, ‘ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್‌ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಈಶ್ವರಪ್ಪ ಅವರು ಯಾವುದೇ ಸ್ಪಷ್ಟನೆ ನೀಡಿಲ್ಲ. ಕಾರಣ ಸಹ ತಿಳಿದುಬಂದಿಲ್ಲ.
ಈ ಪತ್ರ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬಹುದೊಡ್ಡ ಸಂಚಲನವನ್ನೇ ಮೂಡಿಸಿದೆ.

Theft case | ಮನೆಗೆ ಕನ್ನ ಹಾಕಿದ್ದ ಮಹಿಳೆ ಅರೆಸ್ಟ್, ಅವಳ ಬಳಿ ಸಿಕ್ಕಿದ್ದೇನು?

error: Content is protected !!