Assembly election | ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಖರ್ಗೆ, ಶಿವರಾಜ್ ಕುಮಾರ್, ಎಲ್ಲಿ ಏನು ಕಾರ್ಯಕ್ರಮ?

karge and rajkumar

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸೊರಬ ತಾಲೂಕು ಆನವಟ್ಟಿಯಲ್ಲಿ ಏ.30ರಂದು ಬೆಳಗ್ಗೆ 12 ಗಂಟೆಗೆ ನಟ ಶಿವರಾಜ್‌ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರ ರೋಡ್ ಶೋ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಎನ್. ರಮೇಶ್ ಹೇಳಿದರು.

HS Sundresh congress

READ | ಭಾರತದಲ್ಲಿ ನಿರುದ್ಯೋಗ ಹೆಚ್ಚಳಕ್ಕೆ ಪದವೀಧರರ ಸಂಖ್ಯೆಯಲ್ಲಿನ ಏರಿಕೆಯೇ ಕಾರಣವಂತೆ!

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಗೀತಾ ಶಿವರಾಜ್‌ ಕುಮಾರ್ ಈಗಾಗಲೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಅಭ್ಯರ್ಥಿ ಮಧು ಬಂಗಾರಪ್ಪ ಅವರೂ ಸೇರಿದಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವ ಉದ್ದೇಶದಿಂದ ತಮ್ಮ ಪತಿ ಶಿವರಾಜ್‌‌ಕುಮಾರ್ ರವರೊಂದಿಗೆ ರೋಡ್‌ ಶೋನಲ್ಲಿ ಭಾಗವಹಿಸಲಿದ್ದಾರೆ.‌ ಈ ರೋಡ್ ಶೋ ಸುಮಾರು ಎರಡು ಕಿ.ಮೀ. ಇರುತ್ತದೆ. ಮಧ್ಯಾಹ್ನ 4 ಗಂಟೆಗೆ ಆನವಟ್ಟಿಯ ಸರ್ಕಾರಿ ಪ್ರೌಢಶಾಲೆಯ ಮೈದಾನದಲ್ಲಿ  ಬಹಿರಂಗ ಸಭೆ ಇರುತ್ತದೆ. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಕರ್ಗೆ ಕೂಡ ಭಾಗವಹಿಸಲಿದ್ದಾರೆ ಎಂದರು.
ಮಲ್ಲಿಕಾರ್ಜುನ್ ಖರ್ಗೆ ಆಗಮನ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏ.30ರ ನಾಳೆ ಬೆಳಿಗ್ಗೆ 10 ಗಂಟೆಗೆ ಹಾಸನದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಬರಲಿದ್ದಾರೆ. 11.30ಕ್ಕೆ  ಡಿವಿಎಸ್ ಕಾಂಪೋಸಿಟ್ ಕಾಲೇಜಿನ ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದೆ. ನಂತರ ಅವರು ಸೊರಬಕ್ಕೆ ತೆರಳುವರು ಎಂದರು.
ಪ್ರಮುಖರಾದ ಚಂದ್ರಭೂಪಾಲ್, ರವಿಕುಮಾರ್, ಮಧು, ಎಲ್. ಸತ್ಯನಾರಾಯಣ ರಾವ್, ಚಂದ್ರಶೇಖರ್ ಮುಂತಾದವರಿದ್ದರು.

Today arecanut rate | 21/04/2023 ರ ಅಡಿಕೆ ಧಾರಣೆ

error: Content is protected !!