ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು, ಬೆಳಗ್ಗೆ 9 ಗಂಟೆಯವರೆಗೆ ಶೇ.8.61ರಷ್ಟು ಮತದಾನವಾಗಿದೆ.
ಶಿವಮೊಗ್ಗ ಗ್ರಾಮಾಂತರ ಮತ್ತು ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಉತ್ತಮ ಮತದಾನವಾಗಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತಗಟ್ಟೆಗಳಲ್ಲಿ ಜನರಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಮಾಡಲಾಗಿದ್ದು, ಪೊಲೀಸ್ ಮತ್ತು ಸಿಆರ್.ಪಿಎಫ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ವಿಧಾನಸಭೆ ಕ್ಷೇತ್ರ ಶೇಕಡಾವಾರು ಮತದಾನ
ಶಿವಮೊಗ್ಗ ಗ್ರಾಮಾಂತರ- 10.2
ಭದ್ರಾವತಿ- 9.4
ಶಿವಮೊಗ್ಗ- 10.2
ತೀರ್ಥಹಳ್ಳಿ- 9
ಶಿಕಾರಿಪುರ-7.78
ಸೊರಬ- 5.5
ಸಾಗರ- 7.79
ಒಟ್ಟು- 8.61