ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿ (Rangayana repertory)ಯು ಪ್ರತಿ ವರ್ಷ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೋಮಾ ಕೋರ್ಸ್ ಅನ್ನು ನಡೆಸುತ್ತಿದ್ದು, 2023-24ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಕಳೆದ 14 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗ ಶಿಕ್ಷಣವನ್ನು ನೀಡುವ ಸಂಸ್ಥೆ ಇದಾಗಿದ್ದು, ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ಚವಿದ್ಯಾಲಯದ ಮಾನ್ಯತೆ ಪಡೆದಿದೆ.
READ | ಶಿವಮೊಗ್ಗದಲ್ಲಿನ ಯುವತಿ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಏನೆಲ್ಲ ಅರ್ಹತೆ ಹೊಂದಿರಬೇಕು?
- 2023-24ನೇ ಸಾಲಿನ ಈ ರಂಗ ತರಬೇತಿ ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು.
- ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು.
- ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷಗಳು ತುಂಬಿರದ ಅಭ್ಯರ್ಥಿಗಳಾಗಿರಬೇಕು.
- ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಸಿಕ ₹5,000 ವಿದ್ಯಾರ್ಥಿ ವೇತನ ಪಾವತಿಸಲಾಗುವುದು.
ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ರಂಗಶಿಕ್ಷಣ ಕೇಂದ್ರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ದಿನಾಂಕ:15-05-2023ರಿಂದ ರಂಗಾಯಣದ ವೆಬ್ಸೈಟ್ http://rangayanamysore.karnataka.gov.in ನಲ್ಲಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿಯಲ್ಲಿ ಕೆಲಸದ ದಿನಗಳ ಕಚೇರಿ ಅವಧಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅರ್ಜಿ ಶುಲ್ಕ ಸಾಮಾನ್ಯ ವರ್ಗ ₹230, ಪ.ಜಾ, ಪ.ವರ್ಗ ಮತ್ತು ಪ್ರವÀರ್ಗ-1 ಅಭ್ಯರ್ಥಿಗಳಿಗೆ ₹180 ಗಳು (ರಂಗಕೈಪಿಡಿ ಶುಲ್ಕ ₹30 ಒಳಗೊಂಡಂತೆ) ಡಿ.ಡಿ.ಯನ್ನು ಉಪ ನಿರ್ದೇಶಕರು, ರಂಗಾಯಣ, ಮೈಸೂರು (Deputy Director, Rangayana, Mysore) ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ಜೂನ್ 5 ರೊಳಗೆ ತಲುಪುವಂತೆ ಅಂಚೆಯ ಮೂಲಕ ಕಳುಹಿಸಬಹುದು.
ಸಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳಿಗೆ ಪತ್ರ ಮುಖೇನ ತಿಳಿಸಲಾಗುವುದು. ಗರಿಷ್ಠ 15 ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ಹೆಚ್ಚಿನ ವಿವರಕ್ಕಾಗಿ ದೂರವಾಣಿ ಸಂಖ್ಯೆ:0821-2512639, 9448938661 / 9148827720 / 8867514311 ಅನ್ನು ಸಂಪರ್ಕಿಸುವುದು.