Congress 5 Guarantee | ಮೊದಲ ಸಂಪುಟದಲ್ಲೇ ಪಂಚ ಗ್ಯಾರಂಟಿಗೆ ಗ್ರೀನ್ ಸಿಗ್ನಲ್, ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Siddaramaiah CM

 

 

ಸುದ್ದಿ ಕಣಜ.ಕಾಂ ಬೆಂಗಳೂರು
BENGALURU: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಶನಿವಾರ ಸಂಪುಟ ಸಭೆಯನ್ನು ಕರೆದು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ ಐದು ಗ್ಯಾರಂಟಿಗಳಿಗೆ ಒಪ್ಪಿಗೆ ನೀಡಲಾಯಿತು. ಈಗಾಗಲೇ ಈ ಬಗ್ಗೆ ಆದೇಶ ಹೊರಡಿಸಲಾಗಿದೆ.

Guarantee11

READ | ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ನಿಮಗೇನು ಗೊತ್ತು? ತಿಳಿಯಬೇಕಾದ 6 ವಿಚಾರಗಳಿವು

ಯಾವ್ಯಾವ ಗ್ಯಾರಂಟಿಗೆ ಒಪ್ಪಿಗೆ?

  • ಗೃಹ ಜ್ಯೋತಿ 200 ಯೂನಿಟ್ ವಿದ್ಯುತ್ ಉಚಿತ ನೀಡುತ್ತೇವೆ. ಇದಕ್ಕೆ ಒಂದು ತಿಂಗಳಿಗೆ 12,00 ಕೋಟಿ ವೆಚ್ಚ ತಗುಲುತ್ತದೆ.
  • ಗೃಹ ಲಕ್ಷ್ಮಿ ಯೋಜನೆಯ ಪ್ರಕಾರ ಪ್ರತಿ ಮನೆಯ ಒಡತಿಗೆ ತಿಂಗಳಿಗೆ 2000 ರೂಪಾಯಿಯನ್ನು ಖಾತೆಗೆ ಪ್ರತಿ ತಿಂಗಳು ಜಮಾ ಮಾಡಲಾಗುವುದು.
  • ಹತ್ತು ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು.
  • ಯುವ ನಿಧಿ ಅನ್ವಯ ಈ ವರ್ಷ ನಿರುದ್ಯೋಗಿ ಪದವೀಧರರಿಗೆ 2 ವರ್ಷದವರೆಗೆ 3000 ಪ್ರತಿ ತಿಂಗಳಿಗೆ ವಿತರಿಸಲಾಗುವುದು.
  • ಸರ್ಕಾರಿ ಬಸ್’ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು.

ಬಿಜೆಪಿ ಅವಧಿಯಲ್ಲಿ ಸಾಲ ಹೆಚ್ಚಳ
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರದಲ್ಲಿ ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದಾಗ 53.11 ಲಕ್ಷ ರೂ. ಸಾಲವಿತ್ತು. ಈಗ 155 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಬಿಜೆಪಿಯು 2021-22ನೇ ಅವಧಿಯಲ್ಲಿ 78 ಸಾವಿರ ಕೋಟಿ ರೂ. ಸಾಲ ಮಾಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ 3 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ. ಆದರೆ, ಕಾಂಗ್ರೆಸ್ ರಾಜ್ಯವನ್ನು ದಿವಾಳಿಯಾಗದಂತೆ ತಡೆಯಲಿದೆ. ಗ್ಯಾರಂಟಿಗಳನ್ನು ಈಡೇರಿಸಲಿದೆ ಎಂದು ಹೇಳಿದರು.

CM Oath  | ರಾಜ್ಯದ 24ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ, ಪ್ರಮುಖ ಘೋಷಣೆ ಮಾಡಿದ ಸಿಎಂ

error: Content is protected !!