ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಜೂ.3ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಸಚಿವರಾದ ಬಳಿಕ ಮೊದಲ ಸಲ ಶಿವಮೊಗ್ಗಕ್ಕೆ ಆಗಮಿಸುತ್ತಿರುವುದರಿಂದ ಸ್ವಾಗತಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಮಧು ಬಂಗಾರಪ್ಪ ಅವರನ್ನು ಜೂ.3ರಂದು ಬೆಳಗ್ಗೆ 9 ಗಂಟೆಗೆ ಎಂಆರ್ಎಸ್ ವೃತ್ತದಿಂದ ಬೈಕ್ ಹಾಗೂ ವಾಹನಗಳ ರ್ಯಾಲಿ ಮೂಲಕ ಕರೆತರಲಾಗುವುದು. ನಂತರ 10.30ಕ್ಕೆ ನಗರ ಲಗನ ಮಂದಿರದಲ್ಲಿ ಅಭಿನಂದಿಸಲಾಗುವುದು ಎಂದರು.
READ | ಶಿವಮೊಗ್ಗದಲ್ಲಿ ಯಾಮಾರಿಸಿ ಮೊಬೈಲ್ ಕದಿಯುತ್ತಿದ್ದ ಗ್ಯಾಂಗ್ ಬೇಧಿಸಿದ ಪೊಲೀಸ್, ಲಕ್ಷಾಂತರ ಮೌಲ್ಯದ ಮೊಬೈಲ್’ಗಳು
ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರನ್ನು ಸನ್ಮಾನಿಸಲಾಗುವುದು. ಪಕ್ಷದ ಹಿರಿಯ ಮುಖಂಡರಾದ ಕಾಗೋಡು ತಿಮ್ಮಪ್ಪ ಸೇರಿದಂತೆ ಎಲ್ಲ ಜನಪ್ರತಿನಿಧಿಗಳು, ಮಾಜಿ ಸಚಿವರು, ಶಾಸಕರು, ಪದಾಧಿಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರು, ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಆಗಮಿಸಲಿದ್ದಾರೆ ಎಂದರು.
ಪ್ರಮುಖರಾದ ಆರ್.ಪ್ರಸನ್ನಕುಮಾರ್, ಎಚ್.ಸಿ.ಯೋಗೇಶ್, ಜಿ.ಡಿ. ಮಂಜುನಾಥ್, ಕಲಗೋಡು ರತ್ನಾಕರ್, ಎಚ್.ಎಂ. ಚಂದ್ರಶೇಖರಪ್ಪ, ಶಂಕರಘಟ್ಟ ರಮೇಶ್, ಚಂದ್ರ ಭೂಪಾಲ್ ಉಪಸ್ಥಿತರಿದ್ದರು.
ಅಧಿಕಾರಿಗಳೊಂದಿಗೆ ಅನೌಪಚಾರಿಕ ಸಭೆ
ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಅನೌಪಚಾರಿಕೆ ಸಭೆ ನಡೆಸುವರು. 4.30 ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಮಾಡುವುದು.
UPSC Result | ಎರಡನೇ ಪ್ರಯತ್ನದಲ್ಲೇ UPSC ಪರೀಕ್ಷೆಯಲ್ಲಿ ಶಿವಮೊಗ್ಗದ ಮೇಘನಾ ಪಾಸ್, ಸಾಧನೆಯ ಗುಟ್ಟೇನು?