Court news | ಉಮಾಮಹೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ವ್ಯಕ್ತಿಗೆ 6 ವರ್ಷ ಜೈಲು

Judgement

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: 2021ರಲ್ಲಿ ಆಗುಂಬೆ ಪೊಲೀಸ್ ಠಾಣಾ (Agumbe Police station) ವ್ಯಾಪ್ತಿಯ ಹೊಸಕೊಪ್ಪ ಚಂಗಾರು ಗ್ರಾಮದ ಉಮಾ ಮಹೇಶ್ವರ ದೇವಸ್ಥಾನದಲ್ಲಿ ಹುಂಡಿ‌ ಹಣ‌ ಕಳ್ಳತನ ಮಾಡಿದ ವ್ಯಕ್ತಿಗೆ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 6 ವರ್ಷ ಕಠಿಣ ಕಾರಾವಾಸ ಶಿಕ್ಷೆ, ₹20 ಸಾವಿರ ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ ಹೆಚ್ಚುವರಿ 1 ವರ್ಷ ಸಾದಾ ಕಾರಾವಾಸ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಎಜಿ ಕಟ್ಟೆ ನಿವಾಸಿ ಮಂಜುನಾಥ್ ಅಲಿಯಾಸ್ ಬೋರ (41) ಶಿಕ್ಷೆಗೆ ಗುರಿಯಾದ ವ್ಯಕ್ತಿ.

READ | ಮಹಿಳೆಯರಿಗೆ ‘ಶಕ್ತಿ’ ಯೋಜನೆ ಅಡಿ ಉಚಿತ ಬಸ್ ಪ್ರಯಾಣ, ನಾಳೆಯಿಂದ ಪಾಸ್ ಲಭ್ಯ, ಎಲ್ಲೆಲ್ಲಿ ವಿತರಣೆ

ಬಾಗಿಲು‌ ಮುರಿದು ಕಳವು
ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು, ಯಾರೋ ಕಳ್ಳರು ಕಾಣಿಕೆ ಹುಂಡಿಯನ್ನು ಒಡೆದು ಕಾಣಿಕೆ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ದೇವಸ್ಥಾನ ಕಮಿಟಿಯ ಅಧ್ಯಕ್ಷರು ನೀಡಿದ ದೂರಿನ ಮೇರೆಗೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆಗಿನ‌ ತನಿಖಾಧಿಕಾರಿ ಶಿವಕುಮಾರ್ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.
ಹಿರಿಯ ವ್ಯವಹಾರ ಮತ್ತು ಜೆಎಂಎಫ್.ಸಿ ನ್ಯಾಯಾಲಯ ತೀರ್ಥಹಳ್ಳಿಯಲ್ಲಿ ಪ್ರಕರಣದ ವಿಚಾರಣೆ ನಡೆಸಿ ನ್ಯಾಯಾಧೀಶ ಭರತ್ ತೀರ್ಪು ನೀಡಿದ್ದಾರೆ. ಸಹಾಯಕ ಸರ್ಕಾರಿ ಅಭಿಯೋಜಕರಾದ ಡಿ.ಜೆ. ಪ್ರೇಮಲೀಲಾ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

Knee Pain Relief Camp | ನಾಳೆ ಮಂಡಿನೋವಿನ ಪಟ್ಟಿ ಚಿಕಿತ್ಸೆ ಶಿಬಿರ, ಬರಲಿದ್ದಾರೆ ಕೇಂದ್ರ ಪ್ರಶಸ್ತಿ ಪುರಸ್ಕೃತ ತಜ್ಞ ವೈದ್ಯರು

error: Content is protected !!