Power cut | ಜೂ.20, 21ರಂದು ಶಿವಮೊಗ್ಗದ ಕೆಲ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

IMG 20220521 162055 149

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.20ರ ಬೆಳಗ್ಗೆ 9.30 ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

READ | ಸಂತೋಷ ಕೂಟಕ್ಕೆ ಬಂದವರ ದಾರುಣ ಸಾವು, ರಕ್ಷಣೆಗೆ ಧಾವಿಸಿದನೂ ಇನ್ನಿಲ್ಲ

ಯಾವ ಪ್ರದೇಶಗಳಲ್ಲಿ ವ್ಯತ್ಯಯ?
ಕುವೆಂಪುನಗರ, ಎನ್.ಇ.ಎಸ್. ಬಡಾವಣೆ, ಶಿವಬಸವನಗರ, ಇಂದಿರಾಗಾಂದಿ ಬಡಾವಣೆ, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜು, ಪರ್ಪೆಕ್ಟ್ ಅಲಾಯನ್ಸ್ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ಹೊನ್ನಾಳಿ ರಸ್ತೆ, ತ್ಯಾವರೆಚಟ್ನಹಳ್ಳಿ, ಯು.ಜಿ.ಡಿ., ಶೇಷಾದ್ರಿಪುರಂ, ಲಕ್ಷ್ಮೀವೆಂಕಟೇಶ್ವರ ಸಾಮಿಲ್, ತ್ರಿಮೂರ್ತಿನಗರ, ನವುಲೆ, ಅಶ್ವತ್‍ನಗರ, ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರನಗರ, ಕೃಷಿನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಶಿವಮೊಗ್ಗ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ರೈಲ್ವೆ ಕ್ರಾಸಿಂಗ್ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊನ್ನವಿಲೆ ನವುಲೆಬಸವಾಪುರ, ಶೆಟ್ಟಿಹಳ್ಳಿ, ಹೊಸಶೆಟ್ಟಿಹಳ್ಳಿ, ಅಮರಾವತಿ ಕ್ಯಾಂಪ್, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಹಾಥಿಕಟ್ಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜೂ. 20 ರ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಜೂ.21ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಹಾರ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ರೈಲ್ವೆ ಕ್ರಾಸಿಂಗ್ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ಸುತ್ತುಕೋಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜೂ. 21 ರ ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಶ್ವ ಹಾವುಗಳ ದಿನ ಇಂದು | ಸರ್ಪ ಜಗತ್ತಿನ ವಿಶೇಷ ಇಲ್ಲಿದೆ, ಕಡಿತ ತಪ್ಪಿಸಲು ಹೀಗೆ ಮಾಡಿ

error: Content is protected !!