Congress Guarantee | ಕಾಂಗ್ರೆಸ್ ಆರನೇ ಗ್ಯಾರಂಟಿ ಬಗ್ಗೆ ಲೇವಡಿ ಮಾಡಿದ ಬಿ.ವೈ.ವಿಜಯೇಂದ್ರ

BY Vijayendra

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
000: ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಕಾಂಗ್ರೆಸ್ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ.
“ಮುಖ್ಯಮಂತ್ರಿ ವಿಚಾರವೇ ಕಾಂಗ್ರೆಸ್ ನ ಆರನೇ ಗ್ಯಾರಂಟಿ” ಎಂದು ಲೇವಡಿ ಮಾಡಿದರು.
“ಕಾಂಗ್ರೆಸ್ ಗ್ಯಾರಂಟಿಗಳು ರಾಜ್ಯವನ್ನು ಸಂಕಷ್ಟಕ್ಕೆ ಸಿಲುಕಿಸಿವೆ. ಈ ನಡುವೆ ಕಾಂಗ್ರೆಸ್ ಆರನೇ ಗ್ಯಾರಂಟಿ ಬಗ್ಗೆ ಚರ್ಚೆ ಮಾಡುತ್ತಿದೆ. ಐದು ಗ್ಯಾರಂಟಿಗಳ ಬಗ್ಗೆ ನೀಡಿದ ಭರವಸೆಯೇ ಇನ್ನೂ ಪೂರ್ಣಗೊಳಿಸಿಲ್ಲ. ಈಗ ಆರನೇ ಗ್ಯಾರಂಟಿ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಇದು ರಾಜ್ಯದ ದುರಾದೃಷ್ಟದ ಸಂಗತಿ” ಎಂದರು.

READ | ಅಡಿಕೆ ದರದಲ್ಲಿ ಮತ್ತೆ ಏರಿಕೆ, ಇಂದು ಮಾರುಕಟ್ಟೆಯಲ್ಲಿ ಧಾರಣೆ ಎಷ್ಟಿದೆ?

“ಸಿದ್ದರಾಮಯ್ಯ ಅವರು ಸಿಎಂ ಆಗಿ ಉಳಿಯುತ್ತಾರೆಯೇ? ಎಂಬ ಆರನೇ ಗ್ಯಾರಂಟಿ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಉಳಿತಾರೋ ಇಲ್ಲವೋ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಸಚಿವರುಗಳೇ ಚರ್ಚೆ ಮಾಡುತ್ತಿದ್ದಾರೆ” ಎಂದು ಹೇಳಿದರು.
ಕೈಗಾರಿಕೆಗಳ ಮೇಲೆ ಗದಾಪ್ರಹಾರ
ರಾಜ್ಯದಲ್ಲಿರುವ ಕೈಗಾರಿಕೆಗಳು ಮತ್ತು ಉದ್ಯಮಗಳು ನಷ್ಟಕ್ಕೆ ಒಳಗಾಗುತ್ತಿವೆ. ಕೋವಿಡ್ ನಿಂದ ಈ ಹಿಂದೆ ಹೊಡೆತ ತಿಂದಂತಹ ಉದ್ಯಮಗಳು ಈಗ ಮತ್ತೆ ಚೇತರಿಸಿಕೊಳ್ಳುತ್ತಿವೆ. ಈ ಸಂದರ್ಭದಲ್ಲಿ ವಿದ್ಯುತ್ ಬಿಲ್ ಹೆಚ್ಚಳ ಮಾಡಿರುವುದು ರಾಜ್ಯ ಸರ್ಕಾರ ಉದ್ಯಮಗಳ ಮೇಲೆ ಗದಾಪ್ರಹಾರ ಮಾಡಿದೆ ಎಂದು ವಿಜಯೇಂದ್ರ ಟೀಕಿಸಿದರು.

Power cut | ಜೂ.20, 21ರಂದು ಶಿವಮೊಗ್ಗದ ಕೆಲ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

error: Content is protected !!