Job Fair | ಶಿವಮೊಗ್ಗದಲ್ಲಿ‌ ನಡೆಯಲಿದೆ ಉದ್ಯೋಗ ಮೇಳ, ಯಾರೆಲ್ಲ‌ ಪಾಲ್ಗೊಳ್ಳಲು ಅವಕಾಶ?

Job Fair

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ.27ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಹೊಂದಿರಬೇಕಾದ‌ ಅರ್ಹತೆಗಳೇನು?
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ದಿಪ್ಲೋಮಾ ಮತ್ತು ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

READ | ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ನೀಡಿದ ರಾಜ್ಯ ಸರ್ಕಾರ, ಶೀಘ್ರವೇ 3,500 ಹುದ್ದೆಗಳ‌ ನೇಮಕಕ್ಕೆ ಅಧಿಸೂಚನೆ

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9380663606, 9482023412, 9535312531 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Jobs in shimoga | ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗ, ಅರ್ಜಿ‌ ಸಲ್ಲಿಕೆಗೆ 17 ದಿನವಷ್ಟೇ ಬಾಕಿ

error: Content is protected !!