Teachers Transfer | ರಾಜ್ಯದಲ್ಲಿ ಶೀಘ್ರ 25 ಸಾವಿರ ಶಿಕ್ಷಕರ ವರ್ಗಾವಣೆ, ಖಾಲಿ ಹುದ್ದೆಗಳ ನೇಮಕಾತಿ ಬಗ್ಗೆ ಮಧು ಬಂಗಾರಪ್ಪ ಹೇಳಿದ್ದೇನು?

teacher

 

 

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ
THIRTHAHALLI: ಪ್ರಸಕ್ತ ಸಾಲಿನ ಶಿಕ್ಷಕರ ವರ್ಗಾವಣೆಗೆ ಸುಮಾರು 87000 ಶಿಕ್ಷಕರು ಅರ್ಜಿ ಸಲ್ಲಿಸಿದ್ದು , ಅದರಲ್ಲಿ 25000 ಶಿಕ್ಷಕರು ವರ್ಗಾವಣೆ ಯಾಗಲಿದ್ದಾರೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಅಡಚಣೆಯಾಗದಂತೆ ಈ ಪ್ರಕ್ರಿಯೆ ನಡೆಯಲಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಮಧು ಎಸ್.ಬಂಗಾರಪ್ಪ (Madhu S. Bangarappa) ಹೇಳಿದರು.
ತೀರ್ಥಹಳ್ಳಿಯ ತಾಲೂಕು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

READ  | ಟಿಪ್ಪುನಗರ, ದ್ರೌಪದಮ್ಮ ಸರ್ಕಲ್’ದಲ್ಲಿ‌ ಪ್ರತ್ಯೇಕ ಹಲ್ಲೆ ಪ್ರಕರಣ 10 ಜನರ ಬಂಧನ, ಯಾವುದರಿಂದ ಚುಚ್ಚಲಾಗಿತ್ತು?

ರಾಜ್ಯದಲ್ಲಿ ಸುಮಾರು 57000 ಶಿಕ್ಷಕರ ಹುದ್ದೆ ಖಾಲಿ ಇದ್ದು, ತಕ್ಷಣದ ಕ್ರಮವಾಗಿ ಹಾಗೂ ನ್ಯಾಯಾಲಯದ ಸೂಚನೆಯಂತೆ 13000 ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗಿದೆ ಎಂದರು.
ಈ ಶಿಕ್ಷಕರ ನೇಮಕಾತಿಯಲ್ಲಿ ಅತಿ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ನೇಮಕಗೊಳ್ಳುತ್ತಿರುವುದು ವಿಶೇಷ. ಅಲ್ಲದೆ ಶಿಕ್ಷಕರ ಕೊರತೆಯನ್ನು ನೀಗಿಸಲು ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

Madhu Bangarappa
ಮಧು ಬಂಗಾರಪ್ಪ

ವಾಡಿಕೆಗಿಂತ ಕಡಿಮೆ ಮಳೆ
ಜಿಲ್ಲೆಯಲ್ಲಿ ವಾಡಿಕೆ ಪ್ರಮಾಣದ ಮಳೆ ಕೊರತೆಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ಕೊರತೆ ಉಂಟಾಗಿದ್ದು , ನೀರಿನ ಕೊರತೆಯನ್ನು ನೀಗಿಸಲು ಸ್ಥಳೀಯ ಜಲಮೂಲಗಳನ್ನು ಬಳಸಿಕೊಳ್ಳುವಂತೆ ಹಾಗೂ ಅಗತ್ಯವಿರುವಲ್ಲಿ ಟ್ಯಾಂಕರ್ ಗಳ ಮೂಲಕ ನೀರನ್ನು ಸರಬರಾಜು ಮಾಡುವಂತೆ ಮಧು ಎಸ್.ಬಂಗಾರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮೀಣ ಶಾಲೆಗಳ ಸಮಸ್ಯೆಗೆ ಪರಿಹಾರ
ಗ್ರಾಮೀಣ ಶಾಲೆಗಳ ಸಮಸ್ಯೆಯನ್ನು ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಪೋಷಕರು ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ಮತ್ತು ಅಧಿಕಾರಿಗಳ ಸಲಹೆ ಪಡೆದು ಸರಿಪಡಿಸಲು ಯತ್ನಿಸಲಾಗುವುದು. ಮಳೆಹಾನಿ ಸಂದರ್ಭಗಳಲ್ಲಿ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಮಾನವೀಯ ನೆಲೆಯಲ್ಲಿ ಸಂತ್ರಸ್ತರ ನೆರವಿಗೆ ಧಾವಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ರೈತರನ್ನು ಒಕ್ಕಲೆಬ್ಬಿಸದಂತೆ ಸೂಚನೆ
ಯಾವುದೆ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ, ಬಿಸಿಯೂಟ ಕಾರ್ಯಕ್ರಮ ಅನುಷ್ಠಾನದಲ್ಲಿ ಸ್ವಚ್ಚತೆ ಕಾಪಾಡುವಂತೆ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದ ಸಚಿವರು ಅರಣ್ಯಭೂಮಿಯಲ್ಲಿ ರೈತರು ಬೆಳೆದ ಬೆಳೆಯನ್ನು ನಾಶಪಡಿಸದಂತೆ ಹಾಗೂ ಅವರನ್ನು ಒಕ್ಕಲೆಬ್ಬಿಸದಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Madhu Bangarappa | ಶಿವಮೊಗ್ಗ ಜಿಲ್ಲೆಗೆ ಒಲಿದ ಸಚಿವ ಸ್ಥಾನ. ಮಧು ಬಂಗಾರಪ್ಪಗೆ ಮಂತ್ರಿ ಸ್ಥಾನ ಸಿಗಲು ಕಾರಣಗಳೇನು?

error: Content is protected !!