SSP Scholarship | ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ, ಕೊನೆ ದಿನಾಂಕವೇನು?

SSP scholarship

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: 2022-23ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಶುಲ್ಕು ಮರುಪಾವತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 10 ದಿನಗಳ ಕಾಲ ವಿಸ್ತರಿಸಲಾಗಿದೆ.

READ | ಲಿಂಗನಮಕ್ಕಿ ಜಲಾಶಯದಲ್ಲಿ 2 ಅಡಿ ನೀರು ಹೆಚ್ಚಳ, ಉಳಿದ ಡ್ಯಾಂಗಳಲ್ಲಿ ಎಷ್ಟಿದೆ ನೀರು? ತಾಲೂಕುವಾರು ಮಳೆ ಮಾಹಿತಿ ಇಲ್ಲಿದೆ

ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಮನವಿಯನ್ನು ಮಾಡಿಕೊಂಡಿರುತ್ತಾರೆ. ಆದಕಾರಣ, ಶುಲ್ಕ ಮರುಪಾವತಿಗೆ ಮಾತ್ರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜು.6ರಿಂದ 15ರವರೆಗೆ ವಿಸ್ತರಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

CLICK FOR NOTIFICATION

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ವಿದ್ಯಾರ್ಥಿ ವೇತನ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಫೆ.28ಕ್ಕೆ ನಿಗದಿಯಾಗಿತ್ತು. ಅದನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.

Train cancelled | ತಾಳಗುಪ್ಪ-ಶಿವಮೊಗ್ಗ ರೈಲು ರದ್ದು, ರಾಜ್ಯದ ಹಲವು ರೈಲುಗಳ ಸಮಯದಲ್ಲಿ ಬದಲಾವಣೆ, ಕಾರಣವೇನು?

 

error: Content is protected !!