Bike theft | KSRTC ಬಸ್ ನಿಲ್ದಾಣ ಬಳಿ ನಿಲ್ಲಿಸಿದ ಬೈಕ್ ಕಳವು, ವಿಚಾರಣೆ ವೇಳೆ ಮತ್ತಷ್ಟು ಬೈಕ್’ಗಳ ಬಗ್ಗೆ ಮಾಹಿತಿ, ಮುಂದೇನಾಯ್ತು?

Bike Theft

 

 

ಸುದ್ದಿ ಕಣಜ.ಕಾಂ ಭದ್ರಾವತಿ
BHADRAVATHI: ಬೈಕ್ ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸಿದ್ದು, ಆತನ ಬಳಿಯಿಂದ ನಾಲ್ಕು ಬೈಕ್’ಗಳನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ತಾಲೂಕು ದಾನವಾಡಿ ಗ್ರಾಮದ ಉಮೇಶ್(41) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿತನಿಂದ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯ 3 ಮತ್ತು ಚನ್ನಗಿರಿ ಪೊಲೀಸ್ ಠಾಣೆಯ 1 ಪ್ರಕರಣ ಸೇರಿ ಒಟ್ಟು 4 ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ₹1,25,000 ಮೌಲ್ಯದ ಒಟ್ಟು 4 ದ್ವಿಚಕ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

READ | ಶಿವಮೊಗ್ಗ, ತರೀಕೆರೆ ಸೇರಿ 13 ದೇವಸ್ಥಾನಗಳಿಗೆ ಕನ್ನ ಹಾಕಿದ ಗ್ಯಾಂಗ್ ಅರೆಸ್ಟ್, ಅವರ ಬಳಿ‌ಸಿಕ್ಕಿದ್ದೇನು?

ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್
ಜೂನ್ 2ರಂದು ಭದ್ರಾವತಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಚನ್ನಗಿರಿಯ ಗಂಗಾಧರಪ್ಪ ಎಂಬುವವರಿಗೆ ಸೇರಿದ್ದ ಬೈಕ್ ಅನ್ನು‌ ಕಳ್ಳತನ ಮಾಡಲಾಗಿತ್ತು.
ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ತನಿಖಾ ತಂಡದ ಕಾರ್ಯಕ್ಕೆ ಶ್ಲಾಘನೆ
ಆರೋಪಿ ಪತ್ತೆಗಾಗಿ ಎಸ್.ಪಿ.‌ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಎಸ್.ಪಿ ಅನಿಲ್ ಕುಮಾರ್ ಭೂಮರಡ್ಡಿ ಮಾರ್ಗದರ್ಶನದಲ್ಲಿ ಭದ್ರಾವತಿ ಉಪ ವಿಭಾಗದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ಭದ್ರಾವತಿ ನಗರ ವೃತ್ತದ ಸಿಪಿಐ ರಾಘವೇಂದ್ರ ಕಾಂಡಿಕೆ ಮೇಲ್ವಿಚಾರಣೆಯಲ್ಲಿ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯ ಪಿಎಸ್.ಐ ರಮೇಶ್, ಭಾರತಿ ನೇತೃತ್ವದಲ್ಲಿ ಎಎಸ್.ಐ ವೆಂಕಟೇಶ್, ಸಿಬ್ಬಂದಿ ರಂಗನಾಥ್, ತೀರ್ಥಲಿಂಗಪ್ಪ ಮತ್ತು ಪ್ರವೀಣ್ ಕುಮಾರ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ಕೈಗೊಂಡಿದೆ. ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Forest amendment bill | ಅರಣ್ಯಕ್ಕೆ ಅಪಾಯ ತರಲಿದೆ ‘ಅರಣ್ಯ ಕಾಯ್ದೆ ತಿದ್ದುಪಡಿ ಮಸೂದೆ’, ಆಕ್ಷೇಪಣೆ ಸಲ್ಲಿಕೆಗೇನು ಕಾರಣ?

error: Content is protected !!