ಸುದ್ದಿ ಕಣಜ.ಕಾಂ ಬೆಂಗಳೂರು
BENGALURU: ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ 20 ವಿಮಾನಗಳು ಬಂದಿಳಿದಿವೆ. ಇದರಿಂದಾಗಿ ₹12 ಲಕ್ಷ ಆದಾಯ ಬಂದಿದೆ ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ (MB Patil) ಹೇಳಿದರು.
ರಾಜ್ಯದ ಹೊಸ ವಿಮಾನ ನಿಲ್ದಾಣಗಳ ಕಾಮಗಾರಿ ಪ್ರಗತಿ ಮತ್ತಿತರ ವಿಷಯಗಳ ಬಗ್ಗೆ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದರು.
ವಿಜಯಪುರ ಏರ್ ಪೋರ್ಟ್: ರಾತ್ರಿ ಲ್ಯಾಂಡಿಂಗ್ ವ್ಯವಸ್ಥೆ
READ | ಅಕ್ಕಿ ಬದಲು ಹಣ ವರ್ಗಾವಣೆ, ಮಹತ್ವದ ಸೂಚನೆ, ಏನೆಲ್ಲ ಷರತ್ತುಗಳು ಅನ್ವಯ? ಯಾರು ಹಣ ಪಡೆಯಲು ಅರ್ಹರು?
ನಿರ್ಮಾಣ ಹಂತದ ವಿಜಯಪುರ ವಿಮಾನ ನಿಲ್ದಾಣ (vijayapura airport)ದಲ್ಲಿ ರಾತ್ರಿ ಲ್ಯಾಂಡಿಂಗ್ ವ್ಯವಸ್ಥೆ ಕಲ್ಪಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು ತಕ್ಷಣವೇ ಆ ಸೌಲಭ್ಯವನ್ನೂ ಕಲ್ಪಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ನಿಲ್ದಾಣದ ಮೂಲಯೋಜನೆಯಲ್ಲಿ ರಾತ್ರಿ ಲ್ಯಾಂಡಿಂಗ್ ಸೌಲಭ್ಯ ಸೇರಿರಲಿಲ್ಲ. ಈ ಸೌಲಭ್ಯಕ್ಕೆ ವ್ಯವಸ್ಥೆ ಮಾಡಲು ₹12 ಕೋಟಿ ಹೆಚ್ಚುವರಿಯಾಗಿ ಬೇಕಾಗುತ್ತದೆ. ಇದುವರೆಗೆ ಸುಮಾರು ₹350 ಕೋಟಿ ಖರ್ಚಾಗಿದೆ. ರನ್ ವೇ ಪೂರ್ಣಗೊಂಡಿದ್ದು ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ ಕೆಲಸಗಳೆಲ್ಲ ಮೂರು ತಿಂಗಳಲ್ಲಿ ಮುಗಿಯಲಿವೆ. ಕೆಲವು ಉಪಕರಣಗಳ ಅಳವಡಿಕೆ ಮಾತ್ರ ಬಾಕಿ ಇದೆ ಎಂದರು.
ನಿರ್ಮಾಣ ಹಂತದಲ್ಲಿರುವ ಹಾಸನ(hassan), ರಾಯಚೂರು (rayachur) ಮತ್ತು ಕಾರವಾರ (karawar) ವಿಮಾನ ನಿಲ್ದಾಣಗಳ ಕಾರ್ಯ ಪ್ರಗತಿ ಪರಿಶೀಲಿಸಿದರು. ರಾಜ್ಯ ಬಜೆಟ್(Karnataka state budget) ನಲ್ಲಿ ಘೋಷಣೆಗೊಂಡ ಧರ್ಮಸ್ಥಳ, ಕೊಡಗು ಮತ್ತು ಚಿಕ್ಕಮಗಳೂರು ಏರ್ ಸ್ಟ್ರಿಪ್ ಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆಯೂ ಚರ್ಚೆ ನಡೆಸಿದರು.
ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ ಗುಪ್ತ, ಕೆಎಸ್ಐಐಡಿಸಿ ವ್ಮವಸ್ಥಾಪಕ ನಿರ್ದೇಶಕ ಎಂ.ಆರ್.ರವಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ್ ಈ ಸಂದರ್ಭದಲ್ಲಿ ಇದ್ದರು.