ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.9 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ನಾಳೆ ಶಿವಮೊಗ್ಗದ ಹಲವೆಡೆ ಕರೆಂಟ್ ಇರಲ್ಲ, ಎಲ್ಲೆಲ್ಲಿ ಪವರ್ ಕಟ್?
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಗೋಪಾಳಗೌಡ ಬಡಾವಣೆ ಎ ಯಿಂದ ಇ ಬ್ಲಾಕ್, ನೀಲಮೇಘಮ್ ಲೇಔಟ್, ಫ್ರೀಡಂ ಪಾಕ್, ಮೇಧಾರಕೇರಿ ವೃತ್ತ, ಲಕ್ಷ್ಮೀ ಟಾಕೀಸ್ ಮುಂಭಾಗ 100 ಅಡಿ ರಸ್ತೆ, ಮೇಧಾರಕೇರಿ ವೃತ್ತ, ಬೊಮ್ಮನಕಟ್ಟೆ ರಸ್ತೆ, ನಾಗೇಂದ್ರ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಜನಸಂಪರ್ಕ ಸಭೆ
SHIMOGA: ಮೆಸ್ಕಾಂ ಉಡುಪಿ ಉಪವಿಭಾಗ ಕಚೇರಿಯಲ್ಲಿ ಆ.11 ರಂದು ಬೆಳಗ್ಗೆ 10.30 ರಿಂದ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು ಮೆಸ್ಕಾಂ ಅಧಿಕಾರಿಗಳು ಭಾಗವಹಿಸುವರು. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ ದೂ.ಸಂ: 0820-2521761 ಸಂಪರ್ಕಿಸಬಹುದೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಆನವಟ್ಟಿಯಲ್ಲಿ ಜನಸಂಪರ್ಕ ಸಭೆ
SORAB: ಮೆಸ್ಕಾಂ ಆನವಟ್ಟಿ ಉಪವಿಭಾಗ ಕಚೇರಿಯಲ್ಲಿ ಆ 11ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು ಮೆಸ್ಕಾಂ ಅಧಿಕಾರಿಗಳು ಭಾಗವಹಿಸುವರು. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ ದೂ.ಸಂ: 9448998783 ಸಂಪರ್ಕಿಸಬಹುದೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಮೀನುಗಾರಿಕೆ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
SHIMOGA: ಮೀನುಗಾರಿಕೆ ಇಲಾಖೆ ವತಿಯಿಂದ 2023-24 ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
READ | ವಾಟ್ಸಾಪ್, ಫೇಸ್ಬುಕ್ ಗ್ರೂಪ್ ಅಡ್ಮಿನ್’ಗಳೇ ಎಚ್ಚರ! ಶಿವಮೊಗ್ಗ ಪೊಲೀಸರು ಹೇಳಿದ್ದೇನು?
10.00 ಹೆಕ್ಟೆರ್ ನಲ್ಲಿ ಮೀನು ಕೃಷಿಕೊಳಗಳ ನಿರ್ಮಾಣ, ಇದರಲ್ಲಿ ಸಾಮಾನ್ಯ 5 ಹೆಕ್ಟೆರ್, ಮಹಿಳೆ 3 ಹೆಕ್ಟೆರ್, ಪರಿಶಿಷ್ಟ ಜಾತಿ 1.00 ಹೆಕ್ಟೇರ್ ಮತ್ತು ಪರಿಶಿಷ್ಟ ಪಂಗಡ 1 ಹೆಕ್ಟೇರ್. ಮೀನು ಕೃಷಿಕೊಳಗಳ ನಿರ್ಮಾಣ ಮಾಡಿಕೊಂಡು ಮೀನು ಕೃಷಿ ಕೈಗೊಂಡವರಿಗೆ ಹೂಡಿಕೆ ವೆಚ್ಚದ ಮೇಲೆ ಸಹಾಯ-10.00 ಹೆಕ್ಟೆರ್. ಇದರಲ್ಲಿ ಸಾಮಾನ್ಯ 5 ಹೆಕ್ಟೇರ್, ಮಹಿಳೆ 3 ಹೆಕ್ಟೇರ್, ಪರಿಶಿಷ್ಟ ಜಾತಿ 1 ಹೆಕ್ಟೆರ್ ಮತ್ತು ಪರಿಶಿಷ್ಟ ಪಂಗಡ 1 ಹೆಕ್ಟೇರ್.
ಮೀನುಕೃಷಿಗಾಗಿ ಬಯೋಪ್ಲಾಕ್ ಘಟಕ ನಿರ್ಮಾಣಕ್ಕೆ ಸಹಾಯ. ಹೂಡಿಕೆ ವೆಚ್ಚ ಸೇರಿದಂತೆ ಘಟಕ ವೆಚ್ಚ ರೂ.4 ಲಕ್ಷದಲ್ಲಿ ಪರಿಶಿಷ್ಟ ಜಾತಿಗೆ 2 ಘಟಕಗಳು. ಮೀನು ಮಾರಾಟಕ್ಕಾಗಿ ರೆಫ್ರಿಜರೇಟೆಡ್ ವಾಹನ ಖರೀದಿಗೆ ಸಹಾಯ ಪರಿಶಿಷ್ಟ ಜಾತಿಗೆ 1 ಘಟಕ, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ(ಸಾಂಪ್ರದಾಯಿಕ ಮೀನುಗಾರರಿಗೆ –ಎಫ್ಆರ್ಪಿ ಬದಲಿ ದೋಣಿ ನಿರ್ಮಾಣಕ್ಕಾಗಿ ಸಾಮಾನ್ಯ 1 ಮತ್ತು ಮಹಿಳೆ 1 ಒಟ್ಟು 2 ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲಾಗುವುದು.
ಆ.23ರೊಳಗೆ ಅರ್ಜಿ ಸಲ್ಲಿಸಿ
ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುತ್ತದೆ. ಆಸಕ್ತರು ಆ.23 ರೊಳಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿಗಳನ್ನು ಪಡೆದು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕೆಂದು ಮೀನುಗಾರಿಕೆ ಉಪನಿರ್ದೇಶಕ ಶಿವಕುಮಾರ್ ತಿಳಿಸಿದ್ದಾರೆ.
Tunga | ತುಂಗಾ ಎಡದಂಡೆ ಕಾಲುವೆ ನೀರಿನ ಹರಿವು ಕಡಿಮೆ ಸಂಭವ, ಜಿಲ್ಲೆಯಲ್ಲಿ ಎಷ್ಟು ಮಳೆಯಾಗಿದೆ?