Exams | KPSC‌ ಯಿಂದ ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳ ಪರೀಕ್ಷೆ, ಪರೀಕ್ಷಾರ್ಥಿಗಳು ಗಮನಿಸಿಬೇಕಾದ ಅಂಶಗಳಿವು

CET

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ಲೋಕ ಸೇವಾ ಆಯೋಗ(KPSC)ದಿಂದ ನಡೆಸಲಾಗುತ್ತಿರುವ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿಗಳ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ(competative exams)ಗಳು ಆ.19 ಮತ್ತು 20 ರಂದು ನಗರದಲ್ಲಿ ನಡೆಯಲಿದ್ದು ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ (additional deputy commissioner) ಸಿದ್ದಲಿಂಗ ರೆಡ್ಡಿ ಸೂಚಿಸಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ರೇಷ್ಮೆ ವಿಸ್ತರಣಾಧಿಕಾರಿಗಳ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

READ | ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ಸ್ಥಾಪನೆ, ಇದರಿಂದ ಸ್ಥಳೀಯರಿಗೇನು ಪ್ರಯೋಜನ?

ಎಲ್ಲೆಲ್ಲಿ ಪರೀಕ್ಷೆ?
ನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್, ಸರ್ಕಾರಿ ಪದವಿಪೂರ್ವ ಕಾಲೇಜು ಸೈನ್ಸ್ ಮೈದಾನ ಹಾಗೂ ಸರ್ಕಾರಿ ಬಾಲಿಕಾ ಪದವಿಪೂರ್ವ ಕಾಲೇಜು ಈ 3 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಎಂದು, ಯಾವಾಗ ಪರೀಕ್ಷೆ?
ಆ.19 ರಂದು ಮಧ್ಯಾಹ್ನ 2 ರಿಂದ 4 ರವರೆಗೆ 2 ಪರೀಕ್ಷಾ ಕೇಂದ್ರದಲ್ಲಿ ಮತ್ತು ಆ.20 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಹಾಗೂ ಮಧ್ಯಾಹ್ನ 2 ರಿಂದ 4 ಗಂಟೆವರೆಗೆ ಒಟ್ಟು 3 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ಕೇಂದ್ರಗಳ ಸುತ್ತ ಕಲಂ 144
ಪರೀಕ್ಷಾ ವೀಕ್ಷಕರು, ಮಾರ್ಗಾಧಿಕಾರಿಗಳು ಮತ್ತು ಸ್ಥಳೀಯ ನಿರೀಕ್ಷಣಾಧಿಕಾರಿಗಳನ್ನು ನೇಮಿಸಿಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ.ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಬಂದೋಬಸ್ತ್ ನೀಡುವ ಬಗ್ಗೆ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು‌ ಎಡಿಸಿ ತಿಳಿಸಿದರು.
ಪರೀಕ್ಷಾ ಕೊಠಡಿಯೊಳಗೆ ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ವಸ್ತು, ಬ್ಲೂಟೂತ್ ಡಿವೈಸ್ ತರುವಂತಿಲ್ಲ ಎಂದರು.
ಸಭೆಯಲ್ಲಿ ಶಿಕ್ಷಣ ಅಧಿಕಾರಿ ಲೋಕೇಶಪ್ಪ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಬಿಇಓ ನಾಗರಾಜ್, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.

Inspector | ಶಿವಮೊಗ್ಗದಲ್ಲಿ 8 ವರ್ಷದ ಹುಡುಗ ಒಂದು ದಿನದ ಇನ್’ಸ್ಪೆಕ್ಟರ್!

error: Content is protected !!