One click many news | ಶಿವಮೊಗ್ಗದ ಹಲವೆಡೆ ಆ.20ರಂದು ಕರೆಂಟ್ ಇರಲ್ಲ,

one click many news 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಗ್ರಾಮೀಣ ಉಪವಿಭಾಗ ಮಾಜೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಲ್ಲಿ ಆ.20ರಂದ ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

READ | ಶಿವಮೊಗ್ಗದಲ್ಲಿ 8 ವರ್ಷದ ಹುಡುಗ ಒಂದು ದಿನದ ಇನ್’ಸ್ಪೆಕ್ಟರ್!

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಕಿಯೋನಿಕ್ಸ್ ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ನವುಲೆ ಬಸವಾಪುರ, ಹಾತಿಕಟ್ಟೆ, ಹೊನ್ನವಿಲೆ, ಅಮರಾವತಿ ಕ್ಯಾಂಪ್, ಶೆಟ್ಟಿಹರ್ಳಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವ್ಯತ್ಯಯವಾಗಲಿದೆ.

ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

SHIMOGA: 2023-24ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

READ | ಗೃಹಲಕ್ಷ್ಮಿ ಯೋಜನೆಗೆ ಚಾಲನೆಗೆ ದಿನಗಣನೆ, ಶಿವಮೊಗ್ಗದಲ್ಲಿ ಏನೇನು ಸಿದ್ಧತೆ? ಡಿಸಿ ಪ್ರಮುಖ ಮೀಟಿಂಗ್

2022ನೇ ವರ್ಷದಲ್ಲಿ ವಿಜೇತರಾದ ಕ್ರೀಡಾಪಟುಗಳು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಇಲ್ಲಿಗೆ ಭೇಟಿ ನೀಡಿ ಅರ್ಜಿ ಮತ್ತು ಮಾರ್ಗಸೂಚಿಗಳನ್ನು ಪಡೆದು, ಪ್ರಸ್ತಾವನೆಯನ್ನು ಸೆ.05 ರೊಳಗಾಗಿ ನೀಡಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ತಿಳಿಸಿದ್ದಾರೆ.

Tour plan | ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಯಾವ ಕಾರ್ಯಕ್ರಮಗಳಲ್ಲಿ ಭಾಗಿ?

error: Content is protected !!