Drinking Water | ಶಿವಮೊಗ್ಗ ನಗರಕ್ಕೆ 2 ದಿನ ಕುಡಿಯುವ ನೀರು ಪೂರೈಕೆ ಆಗಲ್ಲ, ಕಾರಣವೇನು?

Water tap

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಅವಶ್ಯಕತೆ ಇರುವುದರಿಂದ ಆ.22 ಮತ್ತು 23 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹೀಗಾಗಿ, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

READ | ಮನೆಯಲ್ಲಿ ಸೊಳ್ಳೆಗಳ ನಿಯಂತ್ರಣ ಹೇಗೆ? ಇಲ್ಲಿವೆ ಟಿಪ್ಸ್

ಬಿ.ಇಡಿ/ ಡಿ.ಇಡಿ ಕೋರ್ಸ್ ಗಳಿಗೆ ಪ್ರೋತ್ಸಾಹ ಧನ

SHIMOGA: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2023-24ನೇ ಸಾಲಿಗೆ ಬಿ.ಇಡಿ ಹಾಗೂ ಡಿ.ಇಡಿ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಷರತ್ತುಗಳೇನು?

  • ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಗರಿಷ್ಠ ವರಮಾನ ₹6 ಲಕ್ಷಕ್ಕೆ ಮೀರಿರಬಾರದು.
  • ಅಭ್ಯರ್ಥಿಗಳನ್ನು ಅರ್ಹತೆ ಪರೀಕ್ಷೆ/ ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಸೆ.21 ಕೊನೆಯ ದಿನ
ಆಸಕ್ತ ಅರ್ಹ ವಿದ್ಯಾರ್ಥಿಗಳು ಇಲಾಖೆ ವೆಬ್‌ಸೈಟ್ sevasindhu.karnataka.gov.in ಮೂಲಕ ಸೆಪ್ಟಂಬರ್ 21ರೊಳಗಾಗಿ ಸಲ್ಲಿಸಿ, ನಂತರ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರ ಮೊಹರು ಮತ್ತು ಸಹಿ/ ದೃಢೀಕರಣ ಪಡೆದುಕೊಂಡು, ಅರ್ಜಿಯೊಂದಿಗೆ ಸೂಕ್ತ ದಾಖಲೆಗಳ ಪ್ರತಿಯೊಂದಿಗೆ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-220206 ನ್ನು ಸಂಪರ್ಕಿಸುವುದು.

One click many news | ಸುಸ್ತಾಗಿ ಬಿದ್ದಿದ್ದ ಮಹಿಳೆ ಸಾವು, ಜಿಮ್ ಸ್ಥಾಪನೆಗೆ ಸಹಾಯ ಧನ, ಇನ್ನಷ್ಟು ಸುದ್ದಿ

error: Content is protected !!