ಇಲ್ಲಿದೆ ಸ್ವಯಂ ಉದ್ಯೋಗದ ಅವಕಾಶ, ನಾಲ್ಕು ಜಿಲ್ಲೆಯವರು ಮಾತ್ರ ಅರ್ಜಿ ಸಲ್ಲಿಸಬಹುದು

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೆನರಾ ಬ್ಯಾಂಕ್ ಆರ್.ಸೆಟಿಯಲ್ಲಿ ಟಿ.ವಿ, ಡಿ.ವಿ.ಡಿ ಡಿಜಿಟಲ್ ಎಲೆಕ್ಟ್ರಾನಿಕ್ಸ್ ಸರ್ವಿಸಿಂಗ್ ಹಾಗೂ ಕೃಷಿ ಉದ್ಯಮಗಳಾದ ಹೈನುಗಾರಿಕೆ, ಎರೆಹುಳುಗೊಬ್ಬರ ತಯಾರಿ ಹಾಗೂ ಕೋಳಿ ಸಾಕಾಣಿಕೆ ಕುರಿತು ಉಚಿತ ತರಬೇತಿ ಆಯೋಜಿಸಲಾಗಿದೆ.
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಮಣಿಪಾಲ ಇವರ ವತಿಯಿಂದ ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ ಜನವರಿ 11 ರಿಂದ 30 ದಿನಗಳ ತರಬೇತಿ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ | ಜಿರೋ ಟ್ರಾಫಿಕ್‍ನಲ್ಲಿ ಕೇಂದ್ರ ಸಚಿವ ಸದಾನಂದಗೌಡ ಬೆಂಗಳೂರಿಗೆ, ಮುಂದೇನಾಯ್ತು?

ಯಾವ ತರಬೇತಿ ಯಾವಾಗ: ಜನವರಿ 18ರಿಂದ 13 ದಿನಗಳ ವರೆಗೆ ಹೈನುಗಾರಿಕೆ, ಎರೆಹುಳುಗೊಬ್ಬರ ತಯಾರಿ ಹಾಗೂ ಕೋಳಿ ಸಾಕಾಣಿಕೆ ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದೆ.
ತರಬೇತಿ ವೇಳೆ ಊಟ, ವಸತಿ ಸಂಪೂರ್ಣವಾಗಿ ಉಚಿತವಾಗಿರಲಿದೆ. ಸಂಬಂಧಿಸಿದ ಕ್ಷೇತ್ರದ ಬಗ್ಗೆ ವಿಸ್ತಾರವಾಗಿ ತಿಳಿಸುವುದರ ಜೊತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿ ಮಾಹಿತಿ ನೀಡಲಾಗುತ್ತದೆ.

ಅರ್ಹತೆಗಳೇನು?

  • ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ನೆಲೆಸಿರಬೇಕು
  • 18 ರಿಂದ 45 ರೊಳಗಿನ ವಯೋಮಾನದವರಾಗಿರಬೇಕು
  • ಒಬ್ಬರು ಒಂದು ತರಬೇತಿ ಮಾತ್ರ ಪಡೆಯಲು ಅವಕಾಶವಿದೆ
  • ಬಿ.ಪಿ.ಎಲ್ ಕುಟುಂಬದ ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು

ಇಲ್ಲಿ ಸಂಪರ್ಕಿಸಿ: ಆಸಕ್ತ ಅರ್ಹ ಅಭ್ಯರ್ಥಿಗಳು ಕೂಡಲೇ ತಮ್ಮ ಹೆಸರು, ಪೂರ್ಣ ವಿಳಾಸ, ಪಿನ್ ಕೋಡ್, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಛಿಸಿರುವ ತರಬೇತಿಯ ಹೆಸರು, ಮುಂತಾದ ಮಾಹಿತಿಯೊಂದಿಗೆ ಖಾಲಿ ಹಾಳೆಯಲ್ಲಿ ಅರ್ಜಿಯನ್ನು ಬರೆದು ಜನವರಿ 10ರೊಳಗೆ ಅರ್ಜಿ ಕಳುಹಿಸಬೇಕು.

ಇದನ್ನೂ ಓದಿ | ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಧಾರ: ಬಿ.ಎಸ್.ವೈ

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೆನರಾ ಬ್ಯಾಂಕ್ ಪ್ರ್ರಧಾನ ಕಚೇರಿ (ಅನೆಕ್ಸ್) ಸಂಕೀರ್ಣ, ಮಣಿಪಾಲ  576104 ಇಲ್ಲಿಗೆ ಅರ್ಜಿ ಕಳುಹಿಸಿ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 0820-2570455 ಸಂಪರ್ಕಿಸಬಹುದು.

error: Content is protected !!