One click many news | ಲ್ಯಾಪ್‍ಟಾಪ್ ಬೇಕೇ? ಕೂಡಲೇ ಅರ್ಜಿ ಸಲ್ಲಿಸಿ, ಕಲಾತಂಡಗಳಿಗೆ ಪ್ರಮುಖ ಮಾಹಿತಿ

one click many news 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ಕಾರ್ಮಿಕ ಇಲಾಖೆಯು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

READ |  ಗೃಹಜ್ಯೋತಿ ಯೋಜನೆಗೆ ನೋಂದಣಿ‌ ಹೇಗೆ? ಏನೆಲ್ಲ ಷರತ್ತುಗಳು ಅನ್ವಯ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ಆಸಕ್ತ ವಿದ್ಯಾರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಕಾರ್ಮಿಕ ಅಧಿಕಾರಿ, ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಇವರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ, ಮಕ್ಕಳ ಆಧಾರ್ ಕಾರ್ಡ್, ವ್ಯಾಸಂಗ ದೃಢೀಕರಣ ಪತ್ರ, ಎಸ್.ಎಸ್.ಎಲ್.ಸಿ. ದೃಢೀಕೃತ ಅಂಕಪಟ್ಟಿ, ಇದುವರೆಗೆ ಯಾವುದೇ ಯೋಜನೆಯಡಿ ಲ್ಯಾಪ್‍ಟಾಪ್ ಪಡೆಯದಿರುವ ಬಗ್ಗೆ ಸ್ವಯಂದೃಢೀಕೃತ ಪತ್ರ ಇವುಗಳನ್ನು ಲಗತ್ತಿಸಿ ಸೆ.15 ರೊಳಗಾಗಿ ಇಲಾಖಾ ಕಚೇರಿಗೆ ಸಲ್ಲಿಸುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆ ಕಚೇರಿ ದೂ.ಸಂ.: 08182-248940ನ್ನು ಸಂಪರ್ಕಿಸುವುದು.

ಜಾನಪದ ಕಲಾತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ

SHIMOGA: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಮಾಹಿತಿ ಶಿಕ್ಷಣ ಸಂವಹನ ಚಟುವಟಿಕೆಗಳಲ್ಲಿ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಜಾನಪದ ಮಾಧ್ಯಮದಲ್ಲಿ ಬೀದಿ ನಾಟಕಗಳ ಮೂಲಕ ಸಾರ್ವಜನಿಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ ಸಕ್ರಿಯವಿರುವ ಅರ್ಹ ಕಲಾತಂಡಗಳ ಆಯ್ಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

READ | ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಉದ್ಯೋಗಾವಕಾಶ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಕಲಾತಂಡ ಮತ್ತು ಕಲಾವಿದರು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಕಲಾ ತಂಡದಲ್ಲಿ ಕನಿಷ್ಠ 6-8 ಜನ ಕಲಾವಿದರಿರಬೇಕು ಮತ್ತು ಎಲ್ಲ ಕಲಾವಿದರು ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ನಕಲು ಪ್ರತಿ ಮತ್ತು ಕಲಾತಂಡ ನೋಂದಣಿ ಹಾಗೂ ನವೀಕರಣದ ಪ್ರತಿಯೊಂದಿಗೆ ವಿವರವಾದ ಮಾಹಿತಿಯನ್ನು ಸೆ.5 ರೊಳಗಾಗಿ ಆರೋಗ್ಯಾಧಿಕಾರಿಗಳ ಕಚೇರಿಯ ಐ.ಇ.ಸಿ. ವಿಭಾಗಕ್ಕೆ ಸಲ್ಲಿಸಬೇಕು.
ಆಸಕ್ತ ಕಲಾತಂಡಗಳು ಸೆ.12 ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಯ್ಕೆ ಸಮಿತಿ ಮುಂದೆ ತಮ್ಮ ಕಲಾ ಪ್ರದರ್ಶನ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಆರೋಗ್ಯಾಧಿಕಾರಿಗಳ ಕಚೇರಿಯ ಐ.ಇ.ಸಿ. ವಿಭಾಗ ಅಥವಾ ದೂ.ಸಂ.: 08182-222382 ನ್ನು ಸಂಪರ್ಕಿಸುವುದು.

Smart Traffic | ಟ್ರಾಫಿಕ್ ನಿಯಮ ಉಲ್ಲಂಘಿಸುವ ಮುನ್ನ ಎಚ್ಚರ, ಮನೆಗೆ ಬರಲಿದೆ ದಂಡದ ನೋಟಿಸ್, ಯಾವಾಗಿಂದ ಅನ್ವಯ?

error: Content is protected !!