Jobs in shimoga | ಉಪ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ, ಯಾರಿಗೆಲ್ಲ ಅವಕಾಶ

IMG 20220517 232257 102

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ (department of Soldiers Welfare and Rehabilitation)ಯಲ್ಲಿ ಖಾಲಿ ಇರುವ ಆರು‌ ಉಪ ನಿರ್ದೇಶಕರ (Deputy Director) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಮೇಜರ್/ ಲೆಫ್ಟಿನೆಂಟ್ ಕರ್ನಲ್ ಅಥವಾ ನೌಕಾ ಸೇನೆ ಮತ್ತು ವಾಯು ಸೇನೆಯಲ್ಲಿ ತತ್ಸಮಾನ ರ‌್ಯಾಂಕ್‍ನಿಂದ ಬಿಡುಗಡೆ/ ನಿವೃತ್ತಿ ಹೊಂದಿರುವ 2024ರ ಜನವರಿ 1ಕ್ಕೆ 52 ವರ್ಷದೊಳಗಿನ ವಯೋಮಾನದ, ಎಸ್.ಎಸ್.ಎಲ್.ಸಿ/ ತತ್ಸಮಾನ ತರಗತಿಯಲ್ಲಿ ಒಂದು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿ ತೇರ್ಗಡೆಯಾದ ಸೈನ್ಯಾಧಿಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

JOBS FB Link

READ | ಕೇಂದ್ರೀಯ ಉಗ್ರಾಣ‌ ನಿಗಮದಲ್ಲಿ ಉದ್ಯೋಗ ಅವಕಾಶ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಆಸಕ್ತರು ಅರ್ಜಿ ನಮೂನೆಯನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಲ್ಲಿ ಖುದ್ದಾಗಿ ಅಥವಾ ದೂರವಾಣಿ ಮುಖಾಂತರ ಕರೆ ಮಾಡಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸಂಬಂಧಿತ ಎಲ್ಲ ಶೈಕ್ಷಣಿಕ ಮತ್ತು ಸೇನಾ ದಾಖಲೆಗಳೊಂದಿಗೆ ಕಚೇರಿಗೆ ಸೆ.18 ರೊಳಗೆ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಶಿವಮೊಗ್ಗ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇವರ ದೂರವಾಣಿ ಸಂಖ್ಯೆ 080-25589459 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

Gruha Jyothi scheme | ಗೃಹ ಜ್ಯೋತಿ ಯೋಜನೆಗೆ ನೋಂದಣಿ ಹೇಗೆ, ಯಾರಿಗೆ ಯೋಜನೆ ಲಾಭ? ಏನೆಲ್ಲ ಷರತ್ತುಗಳಿವೆ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

error: Content is protected !!