Agumbe Ghat | ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧದ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಆದೇಶ

Agumbe Ghat

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ 6, 7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದ ಹಿನ್ನೆಲೆ ಸೆ.15 ರವರೆಗೆ ಅಧಿಸೂಚಿಸಲಾಗಿದ್ದ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (shimoga DC Dr.R.Selvamani) ಆದೇಶಿಸಿದ್ದಾರೆ.

READ | ಪೊಲೀಸರ ದಿಢೀರ್ ದಾಳಿ, ಹೊರ ರಾಜ್ಯದವನೂ ಸೇರಿ ಐವರ ಬಂಧನ

ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕೆಂದು ಸಾರ್ವಜನಿಕರು, ಜನಪ್ರತಿನಿಧಿಗಳ ಕೋರಿಕೆಯನ್ನು ಪರಿಗಣನೆ ತೆಗೆದುಕೊಂಡು ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಆದೇಶಿಸಿದ್ದಾರೆ.

error: Content is protected !!