Rowdy | ಶಿವಮೊಗ್ಗದಲ್ಲಿ 241 ರೌಡಿಗಳ ಪರಿಶೀಲನೆ, ಖಡಕ್ ವಾರ್ನಿಂಗ್, ಕಾರಣವೇನು?

police

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯಲ್ಲಿ ಒಟ್ಟು 241 ರೌಡಿಗಳನ್ನು ಪರಿಶೀಲಿಸಿ ಎಚ್ಚರಿಕೆ ನೀಡಲಾಗಿದೆ.
ಮುಂಬರುವ ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಉಪ ವಿಭಾಗಗಳಲ್ಲಿ ಪ್ರತ್ಯೇಕ ತಂಡಗಳು ಏಕಕಾಲದಲ್ಲಿ ಜಿಲ್ಲೆಯಾದ್ಯಂತ ರೌಡಿಗಳ ಮನೆ ಮೇಲೆ ದಾಳಿ‌ ನಡೆಸಲಾಗಿದೆ.

READ | ಅಪ್ಪನ ಆಟೋ ಡ್ರೈವ್ ಮಾಡಿದ ಮಗ, ₹25 ಸಾವಿರ ದಂಡ, ಕಾರಣವೇನು?

ಎಲ್ಲಿ ಎಷ್ಟು ರೌಡಿಗಳ ತಪಾಸಣೆ?
ಶಿವಮೊಗ್ಗ ಎ ಉಪ ವಿಭಾಗದಲ್ಲಿ 39, ಶಿವಮೊಗ್ಗ ಬಿ ಉಪ ವಿಭಾಗದಲ್ಲಿ 38, ಭದ್ರಾವತಿ ಉಪ ವಿಭಾಗದಲ್ಲಿ 72, ಸಾಗರ ಉಪ ವಿಭಾಗದಲ್ಲಿ 21, ಶಿಕಾರಿಪುರ ಉಪ ವಿಭಾಗದಲ್ಲಿ 27, ತೀರ್ಥಹಳ್ಳಿ ಉಪ ವಿಭಾಗದಲ್ಲಿ 44 ಸೇರಿ ಒಟ್ಟು 241 ರೌಡಿಗಳ ಮನೆಗಳನ್ನು‌ ತಪಾಸಣೆ ನಡೆಸಲಾಗಿದೆ.
ರೌಡಿಗಳ‌ ಹಾಜರಾತಿ, ಹಾಲಿ ಮಾಡುತ್ತಿರುವ ಕೆಲಸ, ಮನೆಯಲ್ಲಿ ಮಾದಕ ವಸ್ತು ಹಾಗೂ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಬಗ್ಗೆ ಪರಿಶೀಲಿಸಲಾಯಿತು.
ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ, ಶಾಂತಿಗೆ ಭಂಗವನ್ನುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಸೂಕ್ತ ಎಚ್ಚರಿಕೆ ನೀಡಲಾಗಿರುತ್ತದೆ.

error: Content is protected !!