Crop survey | ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ, ಕೊನೆ ದಿನಾಂಕವೆಂದು?

Crop survey

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: 2023-24 ನೇ ಸಾಲಿನ ರೈತರ ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆಯಾಗಿದ್ದು ರೈತರು ತಾವು ಬೆಳೆದ ಬೆಳೆಯ ಮಾಹಿತಿಯನ್ನು ಸ್ವತಃ ಅಪ್ಲೋಡ್ ಮಾಡಲು ಅವಕಾಶವಿದ್ದು, ತಾವೇ ಬೆಳೆ ಸಮೀಕ್ಷೆ ಮಾಡಿಕೊಳ್ಳಬಹುದು ಎಂದು ತಹಶೀಲ್ದಾರ್ ಎನ್.ಜೆ.ನಾಗರಾಜ್ (shimoga tahasildar N.J.Nagaraj) ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಬೆಳೆ ಸಮೀಕ್ಷೆ ತರಬೇತಿ (crop survey training) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Market news Logo

READ | ಸೆ.11ರ ಅಡಿಕೆ ಧಾರಣೆ, ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ರೇಟ್?

ತಾವು ಬೆಳೆದ ಬೆಳೆಯ ಮಾಹಿತಿ ಪಹಣಿಯಲ್ಲಿ ಬರಲು ಬೆಳೆ ವಿಮೆ ಸೌಲಭ್ಯ ಪಡೆಯಲು, ಬೆಳೆ ಹಾನಿ ಪರಿಹಾರ ಪಡೆಯಲು, ಬೆಂಬಲ ಬೆಲೆ ಯೋಜನೆ ಹಾಗೂ ವಿವಿಧ ಇಲಾಖೆಗಳ ಯೋಜನೆಗಳ ಸೌಲಭ್ಯವನ್ನು ಪಡೆಯಲು ಕೂಡಲೇ ಬೆಳೆ ಸಮೀಕ್ಷೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ಲೇ ಸ್ಟೋರ್’ನಲ್ಲಿ ಆ್ಯಪ್ ಲಭ್ಯ
ಸಹಾಯಕ ಕೃಷಿ ನಿರ್ದೇಶಕರು ಎಸ್. ಟಿ. ರಮೇಶ್ ಮಾತನಾಡಿ, ರೈತರು ತಮ್ಮ ಮೊಬೈಲ್‍ನಲ್ಲಿ ಗೂಗಲ್ ಪ್ಲೇ ಸ್ಟೋರ್(google play store) ಗೆ ಹೋಗಿ “ಮುಂಗಾರು ರೈತರ ಬೆಳೆ ಸಮೀಕ್ಷೆ-2023” ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ನೇರವಾಗಿ ಸಮೀಕ್ಷೆ ಮಾಡಬಹುದು ಹಾಗೂ ತಮ್ಮ ಗ್ರಾಮಕ್ಕೆ ಹಂಚಿಕೆಯಾದ ಖಾಸಗಿ ನಿವಾಸಿಗಳ ಸಹಾಯ ಪಡೆಯಬಹುದು. ಬೆಳೆ ವಿಮೆ ಮಾಡಿಸಿದ ರೈತರು ಕಡ್ಡಾಯವಾಗಿ ಸೆ.15 ರೊಳಗೆ ಬೆಳೆ ಸಮೀಕ್ಷೆ ಮಾಡಿಸಬೇಕು ಎಂದು ತಿಳಿಸಿದರು.
ಬೆಳೆ ಸಮೀಕ್ಷೆ ತರಬೇತಿಯಲ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಕಾಂತರಾಜ್ ಹಾಗೂ ಹೆಚ್.ಈ ಮಹೇಶ್ವರಪ್ಪ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಹಾಗೂ ಕಂದಾಯ, ಕೃಷಿ, ತೋಟಗಾರಿಕೆ, ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ರೈತರ ಮಕ್ಕಳಿಗೂ ಟ್ರೈನಿಂಗ್, ಎಲ್ಲೆಲ್ಲಿ ನಡೀತು?

error: Content is protected !!