Hindu mahasabha ganesh | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಪರ್ಯಾಯ ಮಾರ್ಗಕ್ಕೆ ಜಿಲ್ಲಾಡಳಿತ ಆದೇಶ

Ameer ahmed circle

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಹಿಂದೂ ಮಹಾಸಭಾ ಗಣಪತಿ (hindu mahasabha Ganesh) ಯನ್ನು ಸೆ.28ರಂದು ಮೆರವಣಿಗೆಯ ಮೂಲಕ ವಿಸರ್ಜನೆ ಮಾಡುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ (Dr.R.Selvamani) ಆದೇಶಿಸಿದ್ದಾರೆ.

READ | ಶಿವಮೊಗ್ಗದಲ್ಲಿ ಹೆಚ್ಚುತ್ತಿದೆ ಡೆಂಗೆ, ಚಿಕುನ್’ಗುನ್ಯ, ಲಕ್ಷಣಗಳೇನು? ರೋಗಬಾಧಿತರು ಏನೆಲ್ಲ ಸೇವಿಸಬಾರದು? ಇಲ್ಲಿದೆ ಹೆಲ್ತ್ ಟಿಪ್ಸ್

ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಟಿ ಪಾರ್ಕ್, ಗಾಂಧಿಬಜಾರ್ ಮುಖ್ಯ ರಸ್ತೆ ಎಸ್.ಎನ್. ಸರ್ಕಲ್, ಬಿ.ಎಚ್ ರಸ್ತೆ ಮುಖಾಂತರ ಎ.ಎ ಸರ್ಕಲ್‌ ನೆಹರು ರಸ್ತೆ ಮುಖಾಂತರವಾಗಿ ಗೋಪಿ ಸರ್ಕಲ್‌ ದುರ್ಗಿಗುಡಿ ಮುಖ್ಯ ರಸ್ತೆಯಿಂದ ಜೈಲು ಸರ್ಕಲ್ ಕುವೆಂಪು ರಸ್ತೆ ಮಾರ್ಗವಾಗಿ ಶಿವಮೂರ್ತಿ ಸರ್ಕಲ್, ಸವಳಂಗ ಮುಖ್ಯ ರಸ್ತೆ ಮಾರ್ಗವಾಗಿ ಮಹಾವೀರ ಸರ್ಕಲ್‌, ಡಿವಿಎಸ್ ಸರ್ಕಲ್, ಕಾನ್ವೆಂಟ್ ರಸ್ತೆ ಬಿ.ಎಚ್‌. ರಸ್ತೆ, ಪೊಲೀಸ್‌ ಕಾರ್ನರ್, ಕೋಟೆ ಪೊಲೀಸ್ ಠಾಣೆ ರಸ್ತೆ, ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದಿಂದ ತುಂಗಾನದಿಯಲ್ಲಿ ವಿಸರ್ಜನ ಮಾಡಲಾಗುತ್ತಿದೆ. ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಲಿರುತ್ತಾರೆ. ಭಕ್ತಾಧಿಗಳು ಕಾರು ದ್ವಿಚಕ್ರ, ಬಸ್‌ ಹಾಗೂ ಇತರ ವಾಹನಗಳಲ್ಲಿ ಬಂದು ಹೋಗಲಿರುತ್ತಾರೆ.

Hindu mahasabha ganesh
Hindu Mahasabha Ganesh

ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡ ಸ್ಥಳಗಳಲ್ಲಿ ವಾಹನ ಸಂಚಾರ ನಿಷೇಧ ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಬೇಕೆಂದು ಪೊಲೀಸರು ಪತ್ರದಲ್ಲಿ ಕೋರಿರುತ್ತಾರೆ.
ಸಲ್ಲಿಕೆಯಾದ ಪ್ರಸ್ತಾವನೆಯನ್ನು ಪರಿಶೀಲಿಸಿದ ಜಿಲ್ಲಾಡಳಿತ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅವರು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ವಾಹನಗಳ ಸುಗಮ ಸಂಚಾರ, ನಿಲುಗಡೆ ಹಾಗೂ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮಾಡಿ ಈ ಕೆಳಕಂಡಂತೆ ಅದೇಶಿಸಿದ್ದಾರೆ.
ಮೆರವಣಿಗೆ ಮಾರ್ಗ ಪ್ರಾರಂಭ
ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರಮಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ-ಎಸ್ ಪಿ ಎಂ ಮುಖ್ಯ ರಸ್ತೆ-ರಾಮಣ್ಣ ಶ್ರೇಷ್ಠಿ ಪಾರ್ಕ್‌-ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್ ಎನ್ ಸರ್ಕಲ್-ಬಿ.ಎಚ್.ರಸ್ತೆ -ಮುಖಾಂತರ ಎ.ಎ.ಸರ್ಕಲ್ – ನೆಹರು ರಸ್ತೆ ಮುಖಾಂತರವಾಗಿ- ಗೋಪಿ ಸರ್ಕಲ್- ದುರ್ಗಿಗುಡಿ ಮುಖ್ಯ ರಸ್ತೆಯಿಂದ- ಜೈಲ್ ಸರ್ಕಲ್-ಕುವೆಂಪು ರಸ್ತೆ ಮಾರ್ಗವಾಗಿ-ಶಿವಮೂರ್ತಿ ಸರ್ಕಲ್‌-ಸವಳಂಗ, ಮುಖ್ಯ ರಸ್ತೆ ಮಾರ್ಗವಾಗಿ – ಮಹಾವೀರ ಸರ್ಕಲ್‌- ಡಿವಿಎಸ್ ಸರ್ಕಲ್ – ಕಾನ್ವೆಂಟ್ ರಸ್ತೆ – ಬಿ.ಹೆಚ್.ರಸ್ತೆ – ಪೊಲೀಸ್ ಕಾರ್ನರ್ – ಕೋಟೆ ಪೊಲೀಸ್‌ ಠಾಣೆ ರಸ್ತೆ- ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದಿಂದ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗುವುದು.

READ | ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ‌ ನಡುವೆ ವಾಗ್ವಾದ, ಮುಂದೇನಾಯ್ತು?

ಪರ್ಯಾಯ ಮಾರ್ಗದ ಮಾಹಿತಿ

  1. ಮೇಲ್ಕಂಡ ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲ ವಾಹನಗಳ ಸಂಚಾರ ಹಾಗೂ ನಿಲುಗಡೆ ನಿಷೇಧಿಸಿದೆ.
  2. ಭದ್ರಾವತಿ, ಬೆಂಗಳೂರು ಕಡೆಯಿಂದ ಬರುವ ಎಲ್ಲ ಭಾರಿ ವಾಹನ, ಬಸ್ ಗಳು ಎಂ.ಅರ್.ಎಸ್. ಸರ್ಕಲ್‌ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
  3. ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲ ಭಾರಿ ವಾಹನ, ಮತ್ತು ಬಸ್ ಗಳು ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
  4. ಹೊನ್ನಾಳಿ, ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋಗುವ ಎಲ್ಲ ಭಾರಿ ವಾಹನ ಮತ್ತು ಬಸ್ ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್‌, ಶಂಕರಮಠ ಸರ್ಕಲ್‌, ಹೊಳೆಹೊನ್ನೂರು ಸರ್ಕಲ್‌, ವಿದ್ಯಾನಗರ ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರವಾಗಿ ಹೋಗುವುದು.
  5. ಕೋಟೆ ರಸ್ತೆ ಮತ್ತು ಓಲ್ಡ್ ಬಾರ್ ಲೈನ್ ರಸ್ತೆಯಲ್ಲಿ ಎಲ್ಲ ವಾಹನಗಳ ಸಂಚಾರ ನಿಷೇಧ ಮಾಡುವುದು
  6. ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ ಶಿಕಾರಿಪುರ ಸೊರಬ ಹರಿಹರ, ದಾವಣಗೆರೆ ಹೋಗುವ ಎಲ್ಲ ಬಸ್ ಗಳು ಮತ್ತು ಭಾರಿ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್ -ಆಲ್ಕೊಳ ಸರ್ಕಲ್- ಪೊಲೀಸ್ ಚೌಕಿ – ರಾಜ್ ಕುಮಾರ್ ಸರ್ಕಲ್ ಬೊಮ್ಮನಕಟ್ಟಿ ಮುಖಾಂತರ ಸವಳಂಗ ರಸ್ತೆಗೆ ಹೋಗುವುದು.

ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲ ವಾಹನಗಳು ಬೈಪಾಸ್ ರಸ್ತೆಯ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು. ಈ ಎಲ್ಲ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತ ಹೊರತುಪಡಿಸಿರುತ್ತದೆ.

error: Content is protected !!