Power cut | ಇಂದು, ನಾಳೆ ಶಿವಮೊಗ್ಗದ ಹಲವೆಡೆ ಕರೆಂಟ್ ಇರಲ್ಲ, ಕಾರಣವೇನು?

POWER CUT 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರ ಉಪವಿಭಾಗ-2 ರ ಘಟಕ-4 ರ ಕೆಆರ್ ಪುರಂ ಮತ್ತು ಘಟಕ 6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಸೆ.24 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ಕೋರಿದೆ.

READ |  ಶಿವಮೊಗ್ಗದಲ್ಲಿ ಹೆಚ್ಚುತ್ತಿದೆ ಡೆಂಗೆ, ಚಿಕುನ್’ಗುನ್ಯ, ಲಕ್ಷಣಗಳೇನು? ರೋಗಬಾಧಿತರು ಏನೆಲ್ಲ ಸೇವಿಸಬಾರದು? ಇಲ್ಲಿದೆ ಹೆಲ್ತ್ ಟಿಪ್ಸ್

ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಲೀಂ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹಚ್‍ಬಿ ಕಾಲೋನಿ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ, ಅನುಪಿನಕಟ್ಟೆ ಮುಖ್ಯರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸೆ.25 ರಂದು ವಿದ್ಯುತ್ ವ್ಯತ್ಯಯ

SHIMOGA: ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಸೆ.25 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಬೆಳಗೂರು ಕಾಂಪ್ಲೆಕ್ಸ್, ದುರ್ಗಿಗುಡಿ 1ನೇ ಮತ್ತು 2ನೇ ಪ್ಯಾರಲಲ್ ರಸ್ತೆ, ಎಲ್.ಎಲ್.ಆರ್ ರಸ್ತೆಯಿಂದ ಶಿವಮೊಗ್ಗ ಡಯಾಗ್ನೋಸ್ಟಿಕ್ ಸೆಂಟರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

error: Content is protected !!