ಒಂದು ಘಟನೆಯಿಂದ ಶತಮಾನಗಳ ಇತಿಹಾಸವಿರುವ ಪರಿಷತ್ ವಿಸರ್ಜನೆ ಸರಿಯಲ್ಲ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಒಂದು ಘಟನೆಯಿಂದ 115 ವರ್ಷಗಳ ಶತಮಾನ ಹೊಂದಿರುವ ವಿಧಾನ ಪರಿಷತ್ ವಿಸರ್ಜನೆ ಮಾಡುವುದು ಸರಿಯಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ | ಕಾಂಗ್ರೆಸ್ ನಿರ್ನಾಮಕ್ಕೆ ಸಿದ್ದರಾಮಯ್ಯರ ಸರ್ವಾಧಿಕಾರಿ ಧೋರಣೆಯೇ ಕಾರಣ

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ವಿಸರ್ಜನೆಯ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೀಡಿರುವ ಹೇಳಿಕೆಯು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಹೇಳಿದರು.
ಘಟನೆಯ ಬಗ್ಗೆ ತನಿಖೆ ಮಾಡಲು ಸಮಿತಿಯನ್ನು ರಚಿಸಲಾಗಿದೆ. ದೇಶಕ್ಕೆ ಮಾದರಿ ಸದನ ರದ್ದುಗೊಳಿಸುವ ಅಭಿಪ್ರಾಯ ಸರಿಯಲ್ಲ ಎಂದು ಹೇಳಿದರು.

error: Content is protected !!