Stone pelting | ರಾಗಿಗುಡ್ಡ ಕಲ್ಲು ತೂರಾಟ ಪ್ರಕರಣ, ಎಷ್ಟು FIR ದಾಖಲು, ಎಷ್ಟು ಜನರ ಬಂಧನ, ಏನೆಲ್ಲ‌ ಹಾನಿಯಾಗಿದೆ?

SP Mithun Kumar 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಗುಗುಡ್ಡ(Ragigudda)ದಲ್ಲಿ ಈದ್ ಮಿಲಾದ್ ಮೆರವಣಿಗೆ (eid milad procession) ನಂತರ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಇದುವರೆಗೆ 60 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್ (GK Mithun Kumar) ತಿಳಿಸಿದ್ದಾರೆ.
ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಟ್ಟು 24 ಪ್ರಕರಣಗಳನ್ನು ದಾಖಲಿಸಲಾಗಿದೆ.

VIDEO REPORT 

ಘಟನೆಯಲ್ಲಿ ಏನೆಲ್ಲ‌ ಹಾನಿ?

ಕಲ್ಲು ತೂರಾಟ ಪ್ರಕರಣದಲ್ಲಿ ಒಂದು ನಾಲ್ಕು ಚಕ್ರ ವಾಹನ, ಒಂದು ತ್ರಿಚಕ್ರ ವಾಹನ, ಎರಡು ದ್ವಿಚಕ್ರ ವಾಹನ, ಏಳು ಮನೆಗಳ ಕಿಟಕಿಗಳ ಗಾಜುಗಳು ಒಡೆದಿವೆ.
ಗಾಯಗೊಂಡವರಿಗೆ ಭೇಟಿ
ಕಲ್ಲು ತೂರಾಟದಲ್ಲಿ ಗಾಯಗೊಂಡವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಸಕ ಎಸ್.ಎನ್.ಚನ್ನಬಸಪ್ಪ, ‌ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮಹಾನಗರ ಪಾಲಿಕೆಯ ನಿಕಟ ಪೂರ್ವ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್ ಇತರರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಮುಂದುವರಿದಿದ್ದು, ಪೊಲೀಸರ ಗಸ್ತಿನಲ್ಲಿ ಶಿವಮೊಗ್ಗ ಶಾಂತಿಯುತವಾಗಿದೆ.

Stone pelting | ರಾಗಿಗುಡ್ಡದಲ್ಲಿ ಈಗ ಹೇಗಿದೆ ಸ್ಥಿತಿ?, ಎಷ್ಟು ಮನೆಗಳು ಜಖಂ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

error: Content is protected !!