Court news | ಗುರುಪುರದಲ್ಲಿ ಗಾಂಜಾ ಮಾರಾಟ ಮಾಡಿದ್ದ ಇಬ್ಬರಿಗೆ 2 ವರ್ಷ ಜೈಲು ಶಿಕ್ಷೆ

Ganja

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಗುರುಪುರ(gurupura)ದಲ್ಲಿ ಗಾಂಜಾ (Marijuana) ಮಾರಾಟ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿದ್ದ ಇಬ್ಬರ ವಿರುದ್ಧದ ಆರೋಪಗಳು ದೃಢಪಟ್ಟಿದ್ದು, ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್ ನಾಯಕ್ ಅವರು ಪ್ರಕರಣದ ವಿಚಾರಣೆ ನಡೆಸಿದ್ದು, ಬಾಪೂಜಿನಗರ ನಿವಾಸಿ ರಾಹಿಲ್ ಖಾನ್(22), ವಿನೋಬನಗರ ನಿವಾಸಿ ರೋಹನ್(19) ಅವರಿಗೆ ಶಿಕ್ಷೆ ವಿಧಿಸಿದ್ದಾರೆ.

READ | ಶಿವಮೊಗ್ಗದ ಹಲವೆಡೆ ನಾಳೆ‌ ಕರೆಂಟ್ ಇರಲ್ಲ, ಎಲ್ಲೆಲ್ಲಿ ವ್ಯತ್ಯಯ?

ಅಪರಾಧಿಗಳಿಗೆ ಎರಡು ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ತಲಾ 10 ಸಾವಿರ ರೂ. ದಂಡ ವಿಧಿಸಲಾಗಿದೆ.
ಗುರುಪುರ ಗ್ರಾಮದಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್.ಪಿ ಉಮೇಶ್ ಈಶ್ವರ್ ನಾಯಕ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ರಾಹಿಲ್ ಮತ್ತು ರೋಹನ್ ಅವರನ್ನು ಬಂಧಿಸಿ ಅಂದಾಜು 10,150 ರೂ. ಮೌಲ್ಯ 1,150 ಗ್ರಾಂ ತೂಕದ ಒಣ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಅಂದಾಜು 16 ಸಾವಿರ ರೂ. ಮೌಲ್ಯದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿತ್ತು. ಆಗಿನ ತನಿಖಾಧಿಕಾರಿ ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್.ಐ ಮಂಜುನಾಥ್ ತನಿಖೆ ಕೈಗೊಂಡು, ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಸುರೇಶ್ ವಾದ ಮಂಡಿಸಿದ್ದರು.

error: Content is protected !!