Sumoto Case | ಅರುಣ್ ಕುಮಾರ್ ಪುತ್ತಿಲ ವಿರುದ್ಧ ಸುಮೋಟೊ ಕೇಸ್, ಕಾರಣವೇನು?

arun kumar puthila

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
000: ರಾಗಿಗುಡ್ಡಕ್ಕೆ ಭೇಟಿ ನೀಡಿದ ವೇಳೆ ಪ್ರಚೋದನಾತ್ಮಕ ಹೇಳಿಕೆ ನೀಡಿದ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ (arun kumar puthila) ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಮೋಟೊ ಪ್ರಕರಣ ದಾಖಲಿಸಲಾಗಿದೆ.

READ | ರಾಗಿಗುಡ್ಡದಲ್ಲಿ ಪಿಐಗೆ ಧಮಕಿ ಹಾಕಿದ್ದ ಆರೋಪಿ ಅರೆಸ್ಟ್, ಸುಳ್ಳು ಸುದ್ದಿ ಹಬ್ಬಸಿದವನ ವಿರುದ್ಧ ಎಫ್.ಐಆರ್, ಪರಿಹಾರದ ಬಗ್ಗೆ ಮಧು ಹೇಳಿದ್ದೇನು?

ಇತ್ತೀಚೆಗೆ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದಲ್ಲಿ ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿದ ಅವರು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಕಾರಣಕ್ಕೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ರಾಗಿಗುಡ್ಡ ಭಾಗದಲ್ಲಿ ಉಂಟಾದ ಗಲಭೆ ಹಿನ್ನೆಲೆಯಲ್ಲಿ ಕಲಂ 144ರಡಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪುತ್ತಿಲ ಅವರು ಮಾಧ್ಯಮದವರೊಂದಿಗೆ ಮಾತನಾಡುವಾಗ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರು.

error: Content is protected !!