Lokayuktha trap | ಸ್ಮಶಾನದ ಬಳಿ ಲಂಚ‌ ಪಡೆಯುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ

Bribe lancha

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ತಾಲೂಕಿನ ಬಕ್ಲಾಪುರ ಗ್ರಾಮದ ಸ್ಮಶಾನದ ಬಳಿ ಲಂಚ‌ ಪಡೆಯುತ್ತಿದ್ದ ಶಿವಮೊಗ್ಗ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯ ನಿರ್ದೇಶಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

READ |  ನೈರುತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಇಲ್ಲಿದೆ

₹15 ಸಾವಿರಕ್ಕೆ ಡಿಮ್ಯಾಂಡ್
ಸಮಾಜ ಕಲ್ಯಾಣ ಇಲಾಖೆ ತಾಲೂಕು ಸಹಾಯಕ ನಿರ್ದೇಶಕ ಗೋಪಿನಾಥ್ ಅವರು ಸ್ಮಶಾನದ‌‌ ಬಳಿ ₹15 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದಾರೆ.
ಬುಕ್ಲಾಪುರ ಸ್ಮಶಾನ ಕಾಮಗಾರಿ ಹಣ ಬಿಡುಗಡೆ ಮತ್ತು ಸ್ಥಳ ಪರಿಶೀಲನೆ ಮಾಡಿ ವರದಿ ಕೊಡಲು ₹15 ಸಾವಿರಕ್ಕೆ ಬೇಡಿಕೆ ಇಟ್ಟಿರುವುದಾಗಿ ಆರೋಪಿಸಲಾಗಿದೆ. ಈ ಕುರಿತು ಶಿವಮೊಗ್ಗ ಲೋಕಾಯುಕ್ತರಿಗೆ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಸ್ಮಶಾನದ ಕಾಮಗಾರಿ ಪರಿಶೀಲಿಸಿ ವರದಿ ಕೊಡುವ ಸಂಬಂಧ ₹15 ಸಾವಿರ ಲಂಚ  ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಗೋಪಿನಾಥ್ ಅವರನ್ನು ವಶಕ್ಕೆ‌ ಪಡೆಯಲಾಗಿದೆ.

error: Content is protected !!