ಶಿವಮೊಗ್ಗ-ರಾಣೆಬೆನ್ನೂರು ರೈಲು ಮಾರ್ಗ: 4 ಪಟ್ಟು ಬೆಲೆ ನೀಡಿದರಷ್ಟೇ ಭೂ ಹಸ್ತಾಂತರ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಿವಮೊಗ್ಗ, ಶಿಕಾರಿಪುರ, ರಾಣೆಬೆನ್ನೂರು ಹೊಸ ರೈಲು ಮಾರ್ಗ ನಿರ್ಮಾಣ ಉದ್ದೇಶಕ್ಕಾಗಿ ಸ್ವಾಧೀನ ಪಡಿಸಿಕೊಳ್ಳುವ ಜಮೀನಿಗೆ ನಾಲ್ಕು ಪಟ್ಟು ಬೆಲೆ ನೀಡಿದರಷ್ಟೇ ನೀಡಲು ನಿರ್ಧರಿಸಲಾಯಿತು.

ಇದನ್ನೂ ಓದಿ | ಜನವರಿ 10ರಂದು ಶಿವಮೊಗ್ಗದಲ್ಲಿ ನಡೆಯಲಿದೆ ಶ್ವಾನ, ಬೆಕ್ಕು ಪ್ರದರ್ಶನ, ಕಂಪ್ಲೀಟ್ ಮಾಹಿತಿ ಇಲ್ಲಿದೆ

ಬುಧವಾರ ರೈತ ಸಂಘದ ಕಚೇರಿಯಲ್ಲಿ ರೈತರು ಆಯೋಜಿಸಿದ್ದ ಸಭೆಯಲ್ಲಿ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಎಚ್.ಆರ್ ಬಸವರಾಜಪ್ಪ, ರೈತ ಮುಖಂಡರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಯಿತು.
ಸ್ವಾಧೀನ ಪಡಿಸಿಕೊಳ್ಳುವ ಒಟ್ಟು 1427 ಎಕರೆ ಜಮೀನಿಗೆ ಮಾರುಕಟ್ಟೆ ದರದ ನಾಲ್ಕು ಪಟ್ಟು ಹೆಚ್ಚು ಯೋಗ್ಯ ಬೆಲೆ ಕೊಟ್ಟು ಸರ್ಕಾರ ಖರೀದಿಸಬೇಕು. ಇಲ್ಲವಾದಲ್ಲಿ ಯಾವುದೇ ಕಾರಣಕ್ಕೂ ರೈತರು ಭೂಮಿಯನ್ನು ಕೊಡುವುದಿಲ್ಲವೆಂದು ತೀರ್ಮಾನಿಸಲಾಯಿತು.

ಇದನ್ನೂ ಓದಿ | ಮತ್ತೆ ಸದ್ದು ಮಾಡಿದ ಬಜರಂಗ ದಳ ಸಹ ಸಂಚಾಲಕನ ಮೇಲಿನ ಹಲ್ಲೆ ಪ್ರಕರಣ

error: Content is protected !!