Interview | ಶಿವಮೊಗ್ಗದಲ್ಲಿ ನಡೆಯಲಿದೆ ನೇರ ಸಂದರ್ಶನ, ಎಲ್ಲಿ, ಯಾವಾಗ, ಯಾರೆಲ್ಲ ಭಾಗವಹಿಸಬಹುದು?

IMG 20220517 232257 102

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಎಂಟು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಎಂ.ಬಿ.ಬಿಎಸ್ ಪದವೀಧರರಿಗೆ ನೇರ ಸಂದರ್ಶನವನ್ನು ಕರೆಯಲಾಗಿದೆ.

READ | ವೈದ್ಯಕೀಯ, ಅರೆ ವೈದ್ಯಕೀಯ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಯಾವೆಲ್ಲ ಅರ್ಜಿಗಳು ಖಾಲಿ?

ನ.6ರಂದು ನೇರ ಸಂದರ್ಶನ
ಆಸಕ್ತರು ನ.6ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಬಿ.ಎಚ್.ರಸ್ತೆಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲಕ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222382 ನ್ನು ಸಂಪರ್ಕಿಸುವುದು.

error: Content is protected !!