Janatha darshana | ಶಿವಮೊಗ್ಗದಲ್ಲಿ‌ 2ನೇ ಜನತಾದರ್ಶನಕ್ಕೆ ಡೇಟ್ ಫಿಕ್ಸ್, ಎಲ್ಲಿ, ಯಾವಾಗ? ಅಹವಾಲಿಗೆ ಏನೆಲ್ಲ ಷರತ್ತುಗಳು?

Janatha darshan 1

 

 

ಸುದ್ದಿ ಕಣಜ.ಕಾಂ‌ ಶಿವಮೊಗ್ಗ
SHIVAMOGGA: ರಾಜ್ಯ ಸರ್ಕಾರವು ಆಡಳಿತ ಯಂತ್ರ ಸುಗಮವಾಗಿ ಸಾಗಲಿ ಎಂಬ ಉದ್ದೇಶದಿಂದ ಜಾರಿಗೆ ತಂದಿರುವ ‘ಜನತಾದರ್ಶನ’ಕ್ಕೆ ದಿನಾಂಕ ನಿಗದಿಯಾಗಿದೆ. ಇದು ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ಕಾರ್ಯಕ್ರಮವಾಗಿದ್ದು, ಈ ಸಲ ಜಿಲ್ಲಾ ಉಸ್ತುವಾರಿ ಸಚಿವ ತವರು ಕ್ಷೇತ್ರವನ್ನೇ ಆಯ್ಕೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರ ನೇತೃತ್ವದಲ್ಲಿ ತಾಲೂಕು ಜನತಾದರ್ಶನ ಕಾರ್ಯಕ್ರಮ(Janatha Darshana)ವನ್ನು ಸೊರಬದ ರಂಗಮಂದಿರದಲ್ಲಿ ನ.6 ರಂದು ಬೆಳಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವುದರಿಂದ ಸೊರಬ ತಾಲೂಕಿನ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿರುತ್ತದೆ ಎಂದು‌ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

READ | ಶಿವಮೊಗ್ಗದಲ್ಲಿ ನಡೆದ ಚೊಚ್ಚಲ‌ ಜನತಾದರ್ಶನದಲ್ಲಿ ಸಲ್ಲಿಕೆಯಾದ‌‌ ಅರ್ಜಿಗಳೆಷ್ಟು? ಯಾವ ಇಲಾಖೆಗೆ ಎಷ್ಟು ಅರ್ಜಿಗಳು ಸಲ್ಲಿಕೆ?

ಅಹವಾಲಿಗೆ ಷರತ್ತುಗಳು ಅನ್ವಯ

  1. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೋಬ್ಬರೇ ಸಲ್ಲಿಸಬಹುದು.
  2. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಠ ಇಬ್ಬರಿಗೆ ಅವಕಾಶವನ್ನು ನೀಡಲಾಗುವುದು.
  3. ಅರ್ಜಿ ನೋಂದಾಯಿಸಿ ನಂತರ ಟೋಕನ್‍ಗಳನ್ನು ಪಡೆಯತಕ್ಕದ್ದು.
  4. ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿದವರಿಗೆ ಅವಕಾಶ ಕಲ್ಪಿಸಿಕೊಡಬೇಕು.

error: Content is protected !!